ದಿನಕ್ಕೆ 10 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಿಸುವ ಗುರಿ
Team Udayavani, Sep 26, 2022, 7:40 AM IST
ನವದೆಹಲಿ: ಕೇಂದ್ರ ಸರ್ಕಾರವು ಪ್ರತಿದಿನ 10 ಲಕ್ಷ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನ ಆರಂಭಿಸಿ ನಾಲ್ಕು ವರ್ಷಗಳು ಹಾಗೂ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭಿಸಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಂಥನ ಕಾರ್ಯಕ್ರಮದಲ್ಲಿ ಅವರು ಈ ಮಾತನ್ನಾಡಿದ್ದಾರೆ.
“ಮೊದಲು ದಿನಕ್ಕೆ 1-1.5 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಿಸಲಾಗುತ್ತಿತ್ತು. ಈಗ ಅದು 4-5 ಲಕ್ಷಕ್ಕೆ ಏರಿದೆ. ಅದನ್ನು 10 ಲಕ್ಷಕ್ಕೆ ಏರಿಸುವ ಗುರಿ ಹಾಕಿಕೊಂಡಿದ್ದೇವೆ’ ಎಂದು ಅವರು ಹೇಳಿದರು.
ದೇಶದಲ್ಲಿ ಒಟ್ಟು 28,300 ಆಸ್ಪತ್ರೆಗಳು ಈಗಾಗಲೇ ಈ ಯೋಜನೆಯೊಂದಿಗೆ ಕೈ ಜೋಡಿಸಿವೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.