ಅಮರಾವತಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 12 ನವಜಾತ ಶಿಶುಗಳ ರಕ್ಷಣೆ
Team Udayavani, Sep 25, 2022, 8:55 PM IST
ಅಮರಾವತಿ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ವೆಂಟಿಲೇಟರ್‌ನಲ್ಲಿದ್ದ 12 ಶಿಶುಗಳನ್ನು ಯಾವುದೇ ಗಾಯಗಳಿಲ್ಲದೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಇದನ್ನೂ ಓದಿ : ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ವೈದ್ಯ ಸೇರಿ ಇಬ್ಬರು ಮಕ್ಕಳು ಸಜೀವ ದಹನ
ನವಜಾತ ಶಿಶುಗಳ ಐಸಿಯುನಿಂದ ಹೊಗೆ ಬರುತ್ತಿರುವುದನ್ನು ಆಸ್ಪತ್ರೆಯ ಸಿಬಂದಿ ಗಮನಿಸಿ ತತ್ ಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದ 12 ನವಜಾತ ಶಿಶುಗಳನ್ನು ರಕ್ಷಿಸಿ ದೊಡ್ಡ ದುರಂತವನ್ನು ತಪ್ಪಿಸಿದರು, ”ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿಶಾಮಕ ದಳಗಳು ಸಕಾಲಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದವು, ವೆಂಟಿಲೇಟರ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊಸದಾಗಿ ನೇಮಕಗೊಂಡ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಘಟನೆಯ ಬಗ್ಗೆ 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸಲು ಜಿಲ್ಲಾಧಿಕಾರಿ ಪವನೀತ್ ಕೌರ್ ಅವರು ಜಿಲ್ಲಾ ಸಿವಿಲ್ ಸರ್ಜನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದಾರೆ ಎಂದು ಅವರು ಹೇಳಿದರು.
ಜನವರಿ 9, 2021 ರಂದು, ಪೂರ್ವ ಮಹಾರಾಷ್ಟ್ರದ ಭಂಡಾರಾದಲ್ಲಿರುವ ಜಿಲ್ಲಾ ಜನರಲ್ ಆಸ್ಪತ್ರೆಯ ನವಜಾತ ಆರೈಕೆ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.