ಶಂಕಿತರ ಕೋಡ್‌ವರ್ಡ್‌ಗಳೇ ತಲೆನೋವು!
ಬಂಧಿತರ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು
Team Udayavani, Sep 26, 2022, 6:45 AM IST
ಬೆಂಗಳೂರು: ಭಯೋತ್ಪಾದನೆ ಹಾಗೂ ಉಗ್ರಗಾಮಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಿಎಫ್ಐ ಮುಖಂಡರು ಹಾಗೂ ಕಾರ್ಯಕರ್ತರ ದಾಖಲೆಗಳಲ್ಲಿ ಪತ್ತೆಯಾಗಿರುವ ಕೋಡ್‌ವರ್ಡ್‌ಗಳನ್ನು ಬೇಧಿಸುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.
ಸಿಕ್ಕಿ ಬಿದ್ದಿರುವ 15 ಮಂದಿಯನ್ನು ಆಡುಗೋಡಿ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಂಧನಕ್ಕೊಳಗಾದ ಪಿಎಫ್ಐ ಮುಖಂಡರು ಹಾಗೂ ಕಾರ್ಯಕರ್ತರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿತ್ತು. ಈ ಪೈಕಿ ಕೆಲವೊಂದು ಡೈರಿಗಳು ಪತ್ತೆಯಾಗಿದ್ದವು. ಆ ಡೈರಿಯಲ್ಲಿದ್ದ ಕೆಲ ಕೋಡ್‌ವರ್ಡ್‌ಗಳು ಕಂಡು ಬಂದಿವೆ. ಇದೀಗ ಆ ಕೋಡ್‌ವರ್ಡ್ ಏನನ್ನು ಸೂಚಿಸುತ್ತಿವೆ ಎಂಬುದನ್ನು ಪತ್ತೆ ಹಚ್ಚುವುದೇ ಸವಾಲಾಗಿದೆ. ಇದರಲ್ಲಿ ಮುಖ್ಯವಾಗಿ ಟ್ರೈನಿಂಗ್ ಟುಬಿ ಆರ್ಗನೈಸ್ಡ್’ (ತರಬೇತಿ ಆಯೋಜಿಸಬೇಕು) ಎಂದು ಉಲ್ಲೇಖೀಸಿದ್ದ ದಾಖಲೆಯೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ, ಯಾವ ತರಬೇತಿ ? ಯಾವಾಗ ತರಬೇತಿ ? ಎಂಬುದನ್ನು ಎಲ್ಲೂ ಉಲ್ಲೇಖಿಸಿಲ್ಲ. ಭಯೋತ್ಪಾದನ ಕೃತ್ಯ ಎಸಗುವ ತರಬೇತಿ ಇರಬಹುದಾ ? ಕೋಮುಗಲಭೆ ಗಲಭೆ ಸೃಷ್ಟಿಸುವ ತರಬೇತಿ ಇರಬಹುದಾ? ಸ್ಫೋಟಕ ತಯಾರಿಸುವ ತರಬೇತಿ ಇರಬಹುದಾ ? ಎಂಬಿತ್ಯಾದಿ ಅನುಮಾನಗಳು ಹುಟ್ಟಿಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು
ಪ್ರಮುಖ ಆರೋಪಿಗಳಾದ ನಾಸೀರ್ ಪಾಷಾ ಹಾಗೂ ಮೊಹಮ್ಮದ್ ಅಶ್ರಫ್ನಿಂದ ಪೂರ್ವ ವಿಭಾಗ ಪೊಲೀಸರು ಕೆಲ ಮಾಹಿತಿ ಕಲೆ ಹಾಕಿದ್ದಾರೆ. ಇವರು ಇತರ ಆರೋಪಿಗಳೊಂದಿಗೆ ದೇಶ ವಿರೋಧಿ ಕೃತ್ಯಗಳಿಗೆ ಸಂಬಂಧಿಸಿದ ಪ್ರಚೋದನಕಾರಿ ಅಂಶಗಳ ಬಗ್ಗೆ ಚರ್ಚಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇವರ ಬ್ಯಾಂಕ್ ದಾಖಲೆ ಪರಿಶೀಲಿಸಿ ವಿದೇಶಗಳಿಂದ ಎಷ್ಟು ಪ್ರಮಾಣದಲ್ಲಿ ಫಂಡಿಂಗ್ ಆಗಿದೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.