ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ
Team Udayavani, Sep 26, 2022, 12:49 PM IST
ಮೈಸೂರು: ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ 2022ರ ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ರಂಗಗಳಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ. ನಮ್ಮಲ್ಲಿರುವ ಬಡ ಜನರ ಬದುಕನ್ನು ಎತ್ತರಕ್ಕೆ ಕೊಂಡೊಯ್ಯಬೇಕಿದೆ. ಸರ್ವರಿಗೂ ಲೇಸನ್ನು ಬಯಸುವ ಕಲ್ಯಾಣದ ಚಿಂತನೆಯ ಅವಶ್ಯಕತೆ ಇದೆ. ಅಂಥ ಸದ್ಭುದ್ಧಿ ನೀಡಿ, ಕನ್ನಡ ನಾಡನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿ ಎಂದರು.
ಈ ಬಾರಿ ದಸರಾ ಹಲವಾರು ವಿಶೇಷತೆಗಳಿಂದ ಕೂಡಿವೆ. ಕಳೆದ 2 ವರ್ಷಗಳಿಗಿಂತ ಅರ್ಥಪೂರ್ಣವಾಗಿ, ಗತವೈಭವವನ್ನು ನೆನೆಪಿಸುವ ರೀತಿಯಲ್ಲಿ ಅದ್ದೂರಿಯಾಗಿ ನಾವೆಲ್ಲರೂ ಒಟ್ಟಾಗಿ ಆಚರಣೆ ಮಾಡುತ್ತಿದ್ದೇವೆ. ದಸರಾ ನಾಡ ಹಬ್ಬ. ನಮ್ಮ ನಾಡಿನ ದುಡಿಯುವ ವರ್ಗದ ಕಾರ್ಮಿಕರು, ರೈತರು, ಸಾಮಾನ್ಯ ಜನರು ಮನೆ, ಮನೆಯಲ್ಲಿ ದಸರಾ ಆಚರಿಸಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದು ನಾಡಿನ ಅಭಿವೃದ್ಧಿ, ಸಮೃದ್ಧಿ, ಸುಭಿಕ್ಷೆಯಿಂದ ಇಡಲು ನಾವು ಪ್ರಾರ್ಥಿಸಬೇಕು. ಸದಾ ಕಾಲ ಆ ದೇವಿ ನಮ್ಮ ಪ್ರಾರ್ಥನೆಗೆ ಓಗೊಟ್ಟು ಕಾಲಕಾಲಕ್ಕೆ ಮಳೆ, ಬೆಳೆ ಕೊಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಶಕ್ತಿಯ ಆಶೀರ್ವಾದ ನೀಡುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಚಾಮುಂಡಿ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ತಾಯಿಯ ಶಕ್ತಿ ಪೀಠ ಇಡೀ ನಾಡಿಗೆ ಶಕ್ತಿ ನೀಡುತ್ತಿದೆ. ಅದರ ಫಲವಾಗಿ ಮೈಸೂರು ಮಹಾರಾಜರ ಕಾಲದಿಂದ ಈ ದೇವಿಯ ಪೂಜೆಯನ್ನು ಪ್ರಜಾಪ್ರಭುತ್ವ ಬಂದ ನಂತರವೂ ಮುಂದುವರೆಸಲಾಗುತ್ತಿರುವುದು ಒಂದು ವೈಶಿಷ್ಟ್ಯ ಎಂದರು.
ಇದನ್ನೂ ಓದಿ:RSS, BJP ಕಚೇರಿ, ಮನೆ ಮೇಲೆ ದಾಳಿ: ತಮಿಳುನಾಡು ಪೊಲೀಸರಿಂದ ಪಿಎಫ್ ಐ ಕಾರ್ಯಕರ್ತರ ಬಂಧನ
ಗತಕಾಲದ ವೈಭವದ ಜೊತೆಗೆ ಪ್ರಸ್ತುತ ಕಾಲದ ಕನ್ನಡ ನಾಡಿನ ಶ್ರೇಯೋಭಿವೃದ್ಧಿ ಅಷ್ಟೇ ಮುಖ್ಯ. ಇಂದಿನ ಹತ್ತು ಹಲವಾರು ನೈಸರ್ಗಿಕ ಸವಾಲುಗಳನ್ನು, ನಾವು ಸಮರ್ಥವಾಗಿ ಎದುರಿಸಿ ಜನಕಲ್ಯಾಣದ ಕಡೆ ದಾಪುಗಾಲು ಹಾಕುತ್ತಿದ್ದೇವೆ ಎಂದು ತಿಳಿಸಿದರು.
ನಾಡ ದೇವಿ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2022ರ ದಸರಾ ಮಹೋತ್ಸವದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮ ನೆರವೇರಿಸಿರುವುದು ಸಂತೋಷದ ಹಾಗೂ ಅತ್ಯಂತ ಅಪರೂಪದ ಘಟನೆ. ಇತ್ತೀಚಿನ ದಿನಗಳಲ್ಲಿ ರಾಷ್ಟಪತಿ ಯೊಬ್ಬರು ದಸರಾ ಉದ್ಘಾಟನೆ ಮಾಡಿರುವ ಉದಾಹರಣೆ ಇಲ್ಲ. ಅವರಿಗೆ ಆಹ್ವಾನ ನೀಡಿದ ಕೂಡಲೇ ಒಪ್ಪಿಗೆ ಸೂಚಿಸಿ, ರಾಷ್ಟಪತಿಯಾದ ನಂತರ ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.