ಇರಾನ್ ಹಿಜಾಬ್ ಪ್ರತಿಭಟನೆ: ಅಣ್ಣನ ಮೃತ ದೇಹದ ಮುಂದೆ ಕೂದಲು ಕತ್ತರಿಸಿ ತಂಗಿಯ ಆಕ್ರೋಶ..
ಇರಾನ್ ಸರ್ಕಾರ ಭಾನುವಾರ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಿ ಎಂದು ಹೇಳಿದೆ
Team Udayavani, Sep 26, 2022, 2:11 PM IST
ಟೆಹ್ರಾನ್ : ಇರಾನಿನಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮಹ್ಸಾ ಅಮಿನಿಯ ಸಾವಿನ ನಂತರ ದಿನಕಳೆದಂತೆ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದೆ. ಇರಾನ್ ಮಾಧ್ಯಮವೊಂದರ ಪ್ರಕಾರ ಇದುವರೆಗೆ ಪೊಲೀಸರ ಘರ್ಷಣೆಯಿಂದ ಇದುವರೆಗೆ 41 ಮಂದಿ ಸಾವನ್ನಪ್ಪಿದ್ದು, ಸುಮಾರು 700 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಸೆ.16 ರಿಂದ ಇರಾನ್ ನಲ್ಲಿ ಮಹ್ಸಾ ಅಮಿನಿಯ ಸಾವನ್ನು ಖಂಡಿಸಿ, ಅನೇಕ ಸಂಸ್ಥೆಗಳು, ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಿಂದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ್ದು, ಹಲವು ಮಂದಿಗೆ ಗಾಯಗಳಾಗಿವೆ.
ಇರಾನ್ ಪ್ರತಿಭಟನೆ ಕೂಗು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಜನರ ಖಂಡನೆ, ಆಕ್ರೋಶ ಫೋಟೋ, ವಿಡಿಯೋ ರೂಪದಲ್ಲಿ ಸೋಶಿಯಲ್ ಮೀಡಿಯಾಲ್ಲಿ ಪೋಸ್ಟ್ ಆಗುತ್ತಿದೆ.
ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದು, ಜಾವೇದ್ ಹೈದರಿ ಎನ್ನುವ ಯುವಕ ಕೂಡ ಪ್ರತಿಭಟಿಸುತ್ತಲೇ ಸಾವಿಗೀಡಾದ್ದಾನೆ. ತನ್ನ ಅಣ್ಣನ ಮೃತದೇಹದ ಮುಂದೆ ತಂಗಿ ಕೂದಲು ಕತ್ತರಿಸಿ ರೋಧಿಸುತ್ತಿರುವ, ಸರ್ಕಾರದ ವಿರೋಧ ಪ್ರತಿಭಟಿಸುತ್ತಿರುವ ವಿಡಿಯೋವನ್ನು 1500tasvir_en ಎನ್ನುವ ಟ್ವಿಟರ್ ಖಾತೆ ಹಂಚಿಕೊಂಡು, ಇರಾನ್ ನಲ್ಲಿ ನಡೆಯುತ್ತಿರುವ ಹಿಜಾಬ್ ಕ್ರಾಂತಿಯ ದೃಶ್ಯವೆಂದು ಬರೆದುಕೊಂಡಿದ್ದಾರೆ.
ಇರಾನ್ ಸರ್ಕಾರ ಭಾನುವಾರ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಿ ಎಂದು ಹೇಳಿದೆ.
ಘಟನೆ ಹಿನ್ನೆಲೆ: ಮಹ್ಸಾ ಅಮಿನಿ(22ವರ್ಷ) ಕಳೆದ ವಾರ ಇರಾನ್ ನ ಕುರ್ದಿಸ್ತಾನ್ ಪ್ರಾಂತ್ಯದಿಂದ ತನ್ನ ಸಂಬಂಧಿಕರನ್ನು ಭೇಟಿಯಾಗಲು ರಾಜಧಾನಿ ಟೆಹ್ರಾನ್ ಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಮಹ್ಸಾ ಹಿಜಾಬ್ ಅನ್ನು ಸಮರ್ಪಕವಾಗಿ ಧರಿಸಿಲ್ಲ ಎಂದು ಆರೋಪಿಸಿ ಇರಾನ್ ನೈತಿಕ ಪೊಲೀಸರು ಬಂಧಿಸಿದ್ದರು. ಬಂಧನದ ನಂತರ ಕೋಮಾ ಸ್ಥಿತಿ ತಲುಪಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಕೆ ಶುಕ್ರವಾರ ಸಾವನ್ನಪ್ಪಿದ್ದಳು. ಆದರೆ ಇರಾನ್ ಪೊಲೀಸರ ಹೇಳಿಕೆ ಪ್ರಕಾರ, ಆಕೆಯನ್ನು ಬಂಧಿಸಿದ ವೇಳೆ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾದ ಹೇಳಿಕೆ, ಅಮಿನಿಯನ್ನು ಪೊಲೀಸರು ಹೊಡೆದು ಹತ್ಯೆಗೈದಿರುವುದಾಗಿ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದರು.
Javad Heydari’s sister, who is one of the victims of protests against the murder of #Mahsa_Amini, cuts her hair at her brother’s funeral.#IranRevolution #مهسا_امینیpic.twitter.com/6PJ21FECWg
— 1500tasvir_en (@1500tasvir_en) September 25, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.