ಸಾಮಾಜಿಕ ನ್ಯಾಯದಡಿ ತೇರದಾಳ ಮತ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ: ಮನೋಹರ ಶಿರೋಳ     


Team Udayavani, Sep 26, 2022, 3:32 PM IST

13

ಮಹಾಲಿಂಗಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾನು ತೇರದಾಳ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಆಕಾಂಕ್ಷಿತ ಅಭ್ಯರ್ಥಿಯಾಗಿದ್ದೇನೆ ಎಂದು ರಾಜ್ಯ ಬಿಜೆಪಿ ನೇಕಾರ ಮುಖಂಡ ಮನೋಹರ ಶಿರೋಳ ಹೇಳಿದರು.

ಸೋಮವಾರ ಪಟ್ಟಣದ ಕಾನಿಪ ಸಂಘದ ಕಾರ್ಯಾಲಯದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಅತಿ ಹೆಚ್ಚು ನೇಕಾರರನ್ನು ಹೊಂದಿರುವ ಜಿಲ್ಲೆ ಬಾಗಲಕೋಟೆ. ಅದರಲ್ಲಿಯೂ ವಿಶೇಷವಾಗಿ ತೇರದಾಳ ಮತಕ್ಷೇತ್ರದಲ್ಲಿ ಅತಿ ಹೆಚ್ಚು ನೇಕಾರ ಮತದಾರರಿದ್ದು, ತೇರದಾಳ ಮತಕ್ಷೇತ್ರ “ನೇಕಾರ ಕ್ಷೇತ್ರ”ಎಂದೇ ಬಿಂಬಿತವಾಗಿದೆ ಎಂದರು.

1983 ರಲ್ಲಿ ಬಾಗಲಕೋಟೆ ಜಿಲ್ಲೆಯ ಇತಿಹಾಸದಲ್ಲಿಯೇ ಬಿಜೆಪಿ ಮೊದಲನೆಯ ಶಾಸಕನಾಗಿ ಆಯ್ಕೆಯಾಗಿದ್ದು, ಆಗಿನ ಗುಳೇದಗುಡ್ಡ ಕ್ಷೇತ್ರದಿಂದ ನೇಕಾರ ಸಮಾಜದ ಮಲ್ಲಿಕಾರ್ಜುನ ಬನ್ನಿ ಎಂಬುದನ್ನು ಯಾರು ಮರೆಯುವಂತಿಲ್ಲ. ಅಂದಿನಿಂದ ಈಗಿನವರೆಗೂ ಜಿಲ್ಲೆಯ ನೇಕಾರರೆಲ್ಲ ನಿಷ್ಠೆಯಿಂದ ಬಿಜೆಪಿ ಪಕ್ಷಕ್ಕೆ ಮತ ನೀಡುತ್ತಾ ಬಂದಿದ್ದರೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಇಲ್ಲಿಯವರೆಗೂ ನೇಕಾರ ಸಮಾಜದ ಯಾರಿಗೂ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಅವಕಾಶ ದೊರೆತಿಲ್ಲ ಎಂದು ಹೇಳಿದರು.

ಹಿಂದುಳಿದ ವರ್ಗದ ನೇಕಾರ ಸಮಾಜದವನಾದ ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತನಾಗಿ, 2001 ರಲ್ಲಿ ಮಹಾಲಿಂಗಪುರ ಪುರಸಭೆ ಸದಸ್ಯನಾಗಿ, ಚೇರಮನ್ ಆಗಿ, 2006 ರಿಂದ 2009 ರವರೆಗೆ ಬಿಜೆಪಿ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿಯಾಗಿ, 2010 ರಿಂದ 2013 ರ ವರೆಗೆ ಬಿಜೆಪಿ ನೇಕಾರ ಮೋರ್ಚಾ ಜಿಲ್ಲಾ ಅಧ್ಯಕ್ಷನಾಗಿ, 2014 ರಿಂದ 2019 ರ ವರೆಗೆ 2 ಅವಧಿಗೆ ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕನಾಗಿ ರಾಜ್ಯಾದ್ಯಾಂತ ಪ್ರವಾಸ ಮಾಡಿ ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಮತ್ತು ನೇಕಾರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

ಪಂಚಾಯತಿಯಿಂದ ಹಿಡಿದು ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಪರ ಎಲ್ಲ ಹೋರಾಟಗಳಲ್ಲಿ ಭಾಗಿಯಾಗಿ ಎಲ್ಲ ಚುನಾವಣೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಪಕ್ಷದ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಹೆಮ್ಮೆ ನನಗೆ ಇದೆ ಎಂದು ಹೇಳಿದರು.     ‌‌‌‌‌‌‌‌‌‌‌      ‌‌‌‌‌‌ ‌‌

‌‌‌ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದೀನ ದಯಾಳ ಉಪಾಧ್ಯಾಯರ ಆಶಯದಂತೆ  ಸಾಮಾಜಿಕ ನ್ಯಾಯಕ್ಕೆ ಬದ್ದರಾದ ಬಿಜೆಪಿಯ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರಿಯ ನಾಯಕರು ಹಾಗೂ ಸಂಘಟನೆಯ ಪ್ರಮುಖರು ಹಿಂದುಳಿದ ನೇಕಾರ ಸಮಾಜದವನಾದ ನಾನು ಪಕ್ಷದಲ್ಲಿ ನಿರ್ವಹಿಸಿದ ಜವಾಬ್ದಾರಿಯನ್ನು ಪರಿಗಣಿಸಿ  “ನೇಕಾರ ಮತಕ್ಷೇತ್ರ”ಎಂದು ಬಿಂಬಿತವಾದ ತೇರದಾಳ ಮತಕ್ಷೇತ್ರದಿಂದ ಸ್ಪರ್ಧಿಸಲು ತನಗೆ ಅವಕಾಶ ಮಾಡಿ ಕೊಡುತ್ತಾರೆಂಬ ಸಂಪೂರ್ಣ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂದು ವೇಳೆ ಪಕ್ಷದ ಟಿಕೇಟ್ ಸಿಗದಿದ್ದರೇ ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇರುತ್ತೇನೆ ಎಂದರು.

‌‌‌‌ನೇಕಾರ ಮುಖಂಡ ಮಹಾಲಿಂಗಪ್ಪ ಬಸಪ್ಪ ಕಲ್ಲೋಳ್ಳಿ ಮಾತನಾಡಿ, ನಮ್ಮ ಕುರುಹಿನಶೆಟ್ಟಿ ನೇಕಾರ ಸಮುದಾಯವು ಮೊದಲಿನಿಂದ ಬಿಜೆಪಿ ಪಕ್ಷಕ್ಕೆ ನಿಷ್ಟಾವಂತರಾಗಿದ್ದೇವೆ. ಈ ಕ್ಷೇತ್ರದಲ್ಲಿ ನೇಕಾರ ಸಂಖ್ಯೆ ಅಧಿಕವಾಗಿರುವದರಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಥಳೀಯ ನೇಕಾರರಿಗೆ ಅವಕಾಶ ನೀಡಬೇಕು ಎಂದರು.

ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾವು ಹಾಲಿ ಶಾಸಕ ಸಿದ್ದು ಸವದಿ ಅವರ ವಿರೋಧಿಗಳಲ್ಲ, ನಮ್ಮವರೇ ಜಾಸ್ತಿ ಇರುವ ತೇರದಾಳ ಮತಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ನಮ್ಮ ನೇಕಾರ ಸಮುದಾಯದ ಸ್ಥಳೀಯ ಮುಖಂಡ ಮನೋಹರ ಶಿರೋಳ ಅವರಿಗೆ ಈ ಬಾರಿಯ ಬಿಜೆಪಿ ಟಿಕೇಟ್ ನೀಡಬೇಕೆಂದು ಪಕ್ಷದ ಮುಖಂಡರಿಗೆ ವಿನಂತಿಸಿಕೊಳ್ಳುತ್ತೇವೆ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡ ಹಣಮಂತ ಜಮಾದಾರ ಮಾತನಾಡಿ, 2008 ರಲ್ಲಿ ರಚನೆಯಾದ ತೇರದಾಳ ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಜಮಖಂಡಿ, ಬೆಂಗಳೂರು ಸೇರಿದಂತೆ ಹೊರಗಿನವರೇ ಶಾಸಕರಾಗಿದ್ದಾರೆ. ಈ ಬಾರಿ ಸ್ಥಳೀಯ ಅಭ್ಯರ್ಥಿ, ನೇಕಾರ ಮುಖಂಡ ಮನೋಹರ ಶಿರೋಳ ಅವರಿಗೆ ಅವಕಾಶ ನೀಡಬೇಕೆಂದು ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಮುಖಂಡರಿಗೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೇಕಾರ ಸಮುದಾಯದ ಮುಖಂಡರಾದ ಜಿ.ಎಸ್.ಬರಗಿ, ಸುದರ್ಶನ ಸುಣಧೋಳಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.