ಕೆಲಸ ಮಾಡದ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಎಚ್.ಡಿ.ಕುಮಾರಸ್ವಾಮಿ

Team Udayavani, Sep 26, 2022, 4:07 PM IST

ಕೆಲಸ ಮಾಡದ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದರು.

ಪಕ್ಷ ಸಂಘಟನೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಾಕೀತು ಮಾಡಿದರು.

ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ಆದರೆ, ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಹುದ್ದೆಯಿಂದ ಕಿತ್ತು ಹಾಕುತ್ತೇನೆ: ಸಿಎಂ ಇಬ್ರಾಹಿಂ

ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುವುದು ಎಂದರು.

ಪಕ್ಷದ ಕೆಲಸ ಮಾಡಿ. ಇಲ್ಲವಾದರೆ ಕೆಲಸ ಮಾಡುವವರಿಗೆ ಜಾಗ ಬಿಡಿ. ಪಕ್ಷದ ಕೆಲಸ ಮಾಡದವರಿಗೆ ಅವಕಾಶ ಇಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದರು.

ರಾಜ್ಯ ಪದಾಧಿಕಾರಿಗಳು ಕನಿಷ್ಠ ತಿಂಗಳಿಗೆ ಹದಿನೈದು ದಿನವಾದರೂ ರಾಜ್ಯ ಪ್ರವಾಸ ಮಾಡಬೇಕು. ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಬೇಕು ಎಂದು ಅವರು ತಾಕೀತು ಮಾಡಿದರು.

ಇದನ್ನೂ ಓದಿ:ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ‘ಕಿಲ್ ಯು ಜಿಹಾದಿ’ ಬರಹ

ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ; ಯುವ ಜನತಾ ದಳ ಘಟಕವನ್ನು ಬಲಪಡಿಸುವುದು ಹಾಗೂ ರಾಜ್ಯದ ಉದ್ದಗಲಕ್ಕೂ ಯುವ ಕಾರ್ಯಕರ್ತರನ್ನು ಸಜ್ಜು ಮಾಡಲು ತಕ್ಷಣವೇ ಕ್ರಮ ವಹಿಸಲಾಗುವುದು ಎಂದರು.

ಈಗಾಗಲೇ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಯುವ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಜನತಾ ಜಲಧಾರೆ ಸಮಾವೇಶದಲ್ಲಿ ಯುವ ಪಡೆ ಅದ್ಬುತವಾಗಿ ಕೆಲಸ ಮಾಡಿದ್ದರು. ಮುಂದಿನ ದಿನಗಳಲ್ಲಿಯೂ ನಮ್ಮ ತಂಡ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿದೆ ಎಂದು ನಿಖಿಲ್ ಅವರು ಹೇಳಿದರು.

ಶಾಸಕರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ಕೆ.ಎಂ.ಕೃಷ್ಣಾರೆಡ್ಡಿ, ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ಎನ್.ಎಂ.ನಬಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್ ಮುಂತಾದವರು ಹಾಗೂ ಕಾರ್ಯಕಾರಿಣಿಯ ಎಲ್ಲ ಸದಸ್ಯರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.