ಚಂದ್ರಂಪಳ್ಳಿ ಅಭಿವೃದ್ಧಿಗೆ 7.50 ಕೋಟಿ ರೂ.
ಚಂದ್ರಂಪಳ್ಳಿ ಪ್ರವಾಸಿ ತಾಣವನ್ನಾಗಿ ಮಾಡುವ ನನ್ನ ಕನಸು ಈಡೇರಿದೆ.
Team Udayavani, Sep 26, 2022, 5:10 PM IST
ಚಿಂಚೋಳಿ: ಜಿಲ್ಲೆಯಲ್ಲೇ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಮಿನಿ ಮಲೆನಾಡು ಪ್ರದೇಶವೆಂದೇ ಪ್ರಖ್ಯಾತಿ ಪಡೆದಿರುವ ಕುಂಚಾವರಂ ವನ್ಯಜೀವಿಧಾಮ ಮತ್ತು ಚಂದ್ರಂಪಳ್ಳಿ, ಗೊಟ್ಟಂಗೊಟ್ಟ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವುದಕ್ಕೆ ಕೆಕೆಆರ್‌ಡಿಬಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ 5ಕೋಟಿ ರೂ., ಪ್ರವಾಸೋದ್ಯಮ ಇಲಾಖೆಯಿಂದ 2.50 ಕೋಟಿ ರೂ. ಮಂಜೂರಾಗಿದ್ದು, ಒಟ್ಟು 7.50 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ದೊರಕಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಗೊಟ್ಟಂಗೊಟ್ಟ, ಎತ್ತಪೋತ ಜಲಧಾರೆ, ಚಂದ್ರಂಪಳ್ಳಿ ಜಲಾಶಯ ಸುತ್ತಲಿನ ಅರಣ್ಯ ಪ್ರದೇಶಕ್ಕೆ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿತಾಣ ಅಭಿವೃದ್ಧಿಗಾಗಿ 2ಕೋಟಿ ರೂ. ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಬಿಡುಗಡೆಯಾಗಿದೆ. ಚಂದ್ರಂಪಳ್ಳಿ ನಿಸರ್ಗಧಾಮದಲ್ಲಿ ಜಂಗಲ್ ಲಾಡ್ಜ್ ನಿರ್ಮಾಣಕ್ಕೆ 2ಕೋಟಿ ರೂ. ಅನುದಾನ ಪ್ರವಾಸೋದ್ಯಮ ಇಲಾಖೆಯಿಂದ
ಮಂಜೂರಾಗಿದೆ. ಚಂದ್ರಂಪಳ್ಳಿ ಜಲಾಶಯದಲ್ಲಿ ಬೋಟಿಂಗ್ ಮತ್ತು ಜಲಕ್ರೀಡೆಗಾಗಿ ಪ್ರತ್ಯೇಕವಾಗಿ 50ಲಕ್ಷ ರೂ. ಮಂಜೂರಾಗಿದೆ.
ಚಂದ್ರಂಪಳ್ಳಿ ಜಲಾಶಯ ಸುತ್ತಮುತ್ತ ಪ್ರವಾಸಿಗರು ನಡೆದಾಡಲು ಎರಡು ರಸ್ತೆ, ನಾಲ್ಕು ಪರಗೋಲಾ, ಮಕ್ಕಳ ಆಟದ ಮೈದಾನ, ಮರಳು ಹಾಸಿಗೆ, ಮಕ್ಕಳ
ಆಟಿಕೆ ಸಾಮಗ್ರಿ ಮತ್ತು ಮರಳು ಹಾಸಿಗೆ ಎಂಪಿ ಥಿಯೇಟರ್, ಪ್ರವೇಶ ದ್ವಾರ, ಟಿಕೆಟ್ ಕೌಂಟರ್, ಕಾವಲುಗಾರನ ಕೊಠಡಿ, ಪಾರ್ಕಿಂಗ್, ಶೌಚಾಲಯ, ಭೋಜನಾಲಯ ಕೋಣೆ, ಸೋಲಾರ್ ವಿದ್ಯುತ್ ದೀಪಗಳ ವ್ಯವಸ್ಥೆ, ಬೆಂಚುಗಳು, ವಿಶ್ರಾಂತಿ ಕೋಣೆ, ಶುದ್ಧ ನೀರಿನ ಘಟಕ ಸೇರಿದಂತೆ ಇನ್ನಿತರೆ ಸೌಲಭ್ಯ ಒದಗಿಸಲಾಗುತ್ತಿದೆ.
ಚಿಂಚೋಳಿ ತಾಲೂಕಿನ ನಿಸರ್ಗದ ಪ್ರಕೃತಿ ಮಡಿಲಿನಲ್ಲಿರುವ ಚಂದ್ರಂಪಳ್ಳಿ ಜಲಾಶಯ ಸುತ್ತಮುತ್ತಲಿನ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಕಳೆದ ಮೂರು ವರ್ಷಗಳಿಂದ ಸಾಕಷ್ಟು ಪ್ರಯತ್ನಿಸಿದ ಫಲವಾಗಿ ಸರಕಾರದಿಂದ 7.50ಕೋಟಿ ರೂ. ಅನುದಾನ ಮಂಜೂರಾಗಿದೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿವೆ. ಬೇರೆ ಕಡೆಯಿಂದ ಬರುವ ಪ್ರವಾಸಿಗರಿಗೆ ಜಂಗಲ್ ಲಾಡ್ಜ್ ನಿರ್ಮಿಸಲಾಗುವುದು. ಜಲಕ್ರೀಡೆ ಮತ್ತು
ಬೋಟಿಂಗ್ ವ್ಯವಸ್ಥೆ ನಡೆಸಲಾಗುತ್ತಿದೆ. ಚಂದ್ರಂಪಳ್ಳಿ ಪ್ರವಾಸಿ ತಾಣವನ್ನಾಗಿ ಮಾಡುವ ನನ್ನ ಕನಸು ಈಡೇರಿದೆ.
ಡಾ|ಅವಿನಾಶ ಜಾಧವ, ಶಾಸಕ
ಚಂದ್ರಂಪಳ್ಳಿ ಪ್ರವಾಸಿ ತಾಣ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆ ಮತ್ತು ಕೆಕೆಆರ್‌ಡಿಬಿ ವತಿಯಿಂದ ಹಾಗೂ ಸರ್ಕಾರದಿಂದ ಒಟ್ಟು 7.50ಕೋಟಿ ರೂ. ಅನುದಾನ ಮಂಜೂರಾಗಿದೆ. ಚಂದ್ರಂಪಳ್ಳಿ ಇನ್ಮುಂದೆ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಲಿದೆ. ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ|ಉಮೇಶ ಜಾಧವ, ಶಾಸಕ ಡಾ|ಅವಿನಾಶ ಜಾಧವ ಪ್ರಯತ್ನದಿಂದ ಅಭಿವೃದ್ಧಿಯಾಗುತ್ತಿರುವುದು ಸಂತಸವಾಗಿದೆ.
ಸಂಜೀವಕುಮಾರ ಚವ್ಹಾಣ, ವಲಯ ಅರಣ್ಯಾಧಿಕಾರಿ,
ವನ್ಯಜೀವಿಧಾಮ ಇಲಾಖೆ, ಕುಂಚಾವರಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.