ಸುಳ್ಳು ಸುದ್ದಿಗಳು ಹರಡುತ್ತಿದ್ದ 45 ವಿಡಿಯೋಗಳಿಗೆ ನಿರ್ಬಂಧ
Team Udayavani, Sep 27, 2022, 7:50 AM IST
ನವದೆಹಲಿ: ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಉದ್ದೇಶದಿಂದ ಸುಳ್ಳು ಸುದ್ದಿಗಳು ಮತ್ತು ಮಾರ್ಫ ಮಾಡಿದ ಕಂಟೆಂಟ್ಗಳನ್ನು ಒಳಗೊಂಡಿದ್ದ 10 ಯೂಟ್ಯೂಬ್ ಚಾನಲ್ಗಳ 45 ವಿಡಿಯೋಗಳನ್ನು ಸರ್ಕಾರ ನಿರ್ಬಂಧಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.
ನಿರ್ಬಂಧಿಸಲಾದ ವಿಡಿಯೋಗಳು 1 ಕೋಟಿ 30 ಲಕ್ಷಕ್ಕೂ ಹೆಚ್ಚು ವೀವರ್ಶಿಪ್ ಹೊಂದಿದ್ದವು. ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಸರ್ಕಾರ ಕಸಿದುಕೊಂಡಿದೆ ಎಂದು ವಿಡಿಯೋಗಳಲ್ಲಿ ಪ್ರಸಾರ ಮಾಡಲಾಗಿತ್ತು. ಈ ಚಾನೆಲ್ಗಳು ಸಮುದಾಯಗಳಲ್ಲಿ ಭಯ ಮತ್ತು ತಪ್ಪು ಕಲ್ಪನೆಗಳನ್ನು ಹರಡುವ ಕಂಟೆಂಟ್ ಹೊಂದಿದ್ದವು.
ಅಲ್ಲದೇ ದೇಶದಲ್ಲಿ ಕೋಮು ಸೌಹಾರ್ದತೆ ಮತ್ತು ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಕಂಟೆಂಟ್ ಹೊಂದಿದ್ದವು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.
ಅಗ್ನಿಪಥ ಯೋಜನೆ, ಭಾರತೀಯ ಸೇನೆ, ಕಾಶ್ಮೀರ ಸೇರಿದಂತೆ ದೇಶದ ಭದ್ರತೆಗೆ ಧಕ್ಕೆಯಾಗುವಂತೆ ಸುಳ್ಳು ಮಾಹಿತಿಗಳನ್ನು ನಿರ್ಬಂಧಿತ ವಿಡಿಯೋಗಳು ಪ್ರಸಾರ ಮಾಡುತ್ತಿದ್ದವು ಎಂದು ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.