ಮಟ್ಟಿಯಲ್ಲಿ ಮದಗಜಗಳಂತೆ ಕಾದಾಡಿದ ಕಲಿಗಳು

ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಹಿರಿಯ ಉಸ್ತಾದರು ಪರಿಸ್ಥಿತಿಯನ್ನು ತಿಳಿಗೊಳಿಸಿದರು

Team Udayavani, Sep 27, 2022, 1:15 PM IST

ಮಟ್ಟಿಯಲ್ಲಿ ಮದಗಜಗಳಂತೆ ಕಾದಾಡಿದ ಕಲಿಗಳು

ಮೈಸೂರು: ಮಟ್ಟಿಯಲ್ಲಿ ನಿಂತು ಎದುರಾಳಿಯನ್ನು ಮಣಿಸಲು ಡಾವು ಹೊಡೆದು ತೋಡು ಹಾಕುತ್ತ ಚಿತ್‌ ಮಾಡಲು ತಲ್ಲೀನರಾಗಿದ್ದ ಪೈಲ್ವಾನರ ಕಾಳಗ ನೋಡುಗರನ್ನು ರೋಮಾಂಚನಗೊಳಿತು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದ ಡಿ.ದೇವರಾಜ ಅರಸು
ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿಯ ಮೊದಲ ದಿನ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಪೈಲ್ವಾನರು ಮಟ್ಟಿಯಲ್ಲಿ ನಿಂತು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.

ಕುಸ್ತಿ ಪಂದ್ಯಾವಳಿಗೆ ಚಾಲನೆ ಸಿಗುತ್ತಿದ್ದಂತೆ ಮೊದಲ ಪಂದ್ಯದಲ್ಲಿ ಭಾರತೀಯ ಕೇಸರಿಗಳು’ ಬಿರುದಾಕಿಂತ ಭಾರತ ಕೇಸರಿ ಸೀನಿಯರ್‌ಮೆಡಲೀಸ್ಟ್ ವಿಕಾಸ ಕಾಳ ಮತ್ತು ಕೊಲ್ಹಾಪುರದ ಪೈಲ್ವಾನ್‌ ಸಿದ್ದೇಶ್ವರ ಮೌಲಿ ಜಮದಾಳೆ ಕೆಮ್ಮಣ್ಣಿನಲ್ಲಿ ಮದಗಜಗಳಂತೆ ಕಾದಾಡುತ್ತ ದೂಳೆಬ್ಬಿಸಿದರು. ಜಾರುವ ಮೈಗೆ ಮೈ ಕೊಡುವುತ್ತ ಹಾಕುತ್ತಿದ್ದ ಪಟ್ಟುಗಳನ್ನು ಮೊದಲಾರ್ಧದಲ್ಲಿ ಸಡಿಲಿಸುತ್ತಿದ್ದ ಕಾಳೆ ದ್ವಿತೀಯಾರ್ಧದಲ್ಲಿ ಮೇಲುಗೈ ಸಾಧಿಸಿದ್ದಲ್ಲದೆ ಎರಡು ಬಾರಿ ಎದುರಾಳಿಯನ್ನು ಮಣ್ಣಿಗೆ ಕೆಡವಿ ಕುಸ್ತಿಪ್ರಿಯರ ಶಿಳ್ಳೆ ಚಪ್ಪಾಳೆಗಳನ್ನು ಗಿಟ್ಟಿಸಿದರು. ಮೈಸೂರು ಶೈಲಿಯ ಕುಸ್ತಿ ನಿಯಮ ದಂತೆ ಚಿತ್‌ ಮಾಡಬೇಕು. ಆದರೆ, ಕಣದಿಂದ ಆಚೆಗಟ್ಟಿ ಗೆಲ್ಲಲು ಇಬ್ಬರೂ ಪೈಲ್ವಾನರು ನೋಡಿದರು. ನಿಯಮ ಅರಿತ ನಂತರ ಅಂಗಳದಲ್ಲಿಯೇ ಪೈಪೋಟಿ ನಡೆಸಿದರು. ಆದರೆ, ಪಂದ್ಯಾ ಡ್ರಾನಲ್ಲಿ ಅಂತ್ಯಗೊಂಡಿತು.

ಮೊದಲ ಪಂದ್ಯದಲ್ಲಿ ವಾಗ್ವಾದ: ನಿಯಮ ಸರಿಯಾಗಿ ತಿಳಿಯದ ಕೊಲ್ಹಾಪುರದ ಪೈಲ್ವಾನ್‌ ಸಿದ್ದೇಶ್ವರ ಮೌಲಿ ಜಮದಾಳೆ ನಿಯಮದಲ್ಲಿ ಗೊಂದಲದಿಂದ ವಾಗ್ವಾದಕ್ಕೆ ಕಾರಣವಾಗಿತ್ತು. ಜಮದಾಳೆ ತಮ್ಮ ಭಾಗದ ಮಾದರಿಯಲ್ಲಿ ಚಿತ್‌ ಮಾಡಲು ಯತ್ನಿಸಿದರು. ಇದಕ್ಕೆ ತೀರ್ಪುಗಾರರು ಮೈಸೂರಿನ ಮಾದರಿಯಲ್ಲಿಯೇ ಕುಸ್ತಿ ಚಿತ್‌ ಆಗಬೇಕು ಎಂದು ಹೇಳಿದರು. ಇದರಿಂದ ಜಮದಾಳೆ ಗೊಂದಲಕ್ಕಿಡಾದರು. ಅಷ್ಟರಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ವ್ಯಕ್ತಿಯೋರ್ವ ಅವಾಚ್ಯ ಶಬ್ಧದಿಂದ ನಿಂದಿಸಿದ. ಇದರಿಂದ ಕುಪಿತಗೊಂಡ ಜಮದಾಳೆ ನಿಂದಿಸಿದ ವ್ಯಕ್ತಿಯನ್ನು ಅಖಾಡಕ್ಕೆ ಕರೆದ. ಅಷ್ಟರಲ್ಲಿ ಶಾಸಕ ನಾಗೇಂದ್ರ ಪೈಲ್ವಾನನ್ನು ಮೈಸೂರು ಕುಸ್ತಿ ನಿಯಮದ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು. ಆದರೂ ಪೈಲ್ವಾನ್‌ ದುರ್ವತನೆ ತೋರಿದ್ದರಿಂದ ಪ್ರೇಕ್ಷಕರು ಗದರಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಹಿರಿಯ ಉಸ್ತಾದರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಕುಸ್ತಿಗೆ ಸಚಿವ ಚಾಲನೆ: ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ದಸರಾ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಾನು ಮತ್ತು ನಾರಾಯಣ್‌ ಗೌಡ ಇಬ್ಬರು ಕುಸ್ತಿಗೆ ರೆಡಿ ಇದ್ವಿ. ಆದರೆ ದಸರಾ ಕುಸ್ತಿ ಉಪ ಸಮಿತಿಯ ವಿಶೇಷಾಧಿಕಾರಿ ನಂದಿನಿಯವರು ಅವಕಾಶ ನೀಡಲಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ನಾರಾಯಣಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ , ಅಪರ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ, ದಸರಾ ಕುಸ್ತಿ ಉಪಸಮಿತಿಯ ಅಧ್ಯಕ್ಷ ಕೆ.ದೇವರಾಜ್‌, ಉಪಾಧ್ಯಕ್ಷರಾದ ವೇದರಾಜ್‌ ಎಸ್‌.ಹೂಟಗಳ್ಳಿ, ಮಹೇಶ್‌ ರಾಜೇ ಅರಸ್‌, ಎಂ.ಎಂ.ರಾಜೇಗೌಡ, ಕಾರ್ಯಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಎಸ್‌. ಜೆ.ಹರ್ಷವರ್ಧನ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.