ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಗಣ್ಯರು ಭಾಗಿ
Team Udayavani, Sep 27, 2022, 7:49 PM IST
ಟೋಕಿಯೋ: ಸರ್ಕಾರಿ ಗೌರವಗಳೊಂದಿಗೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ, ಜಪಾನ್ ರಾಜಕುಮಾರ ಅಕಿಶಿನೊ ಸೇರಿದಂತೆ ಜಗತ್ತಿನ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಯಲ್ಲಿ 20 ದೇಶಗಳ ಸರ್ಕಾರಿ ಮುಖ್ಯಸ್ಥರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು ಭಾಗವಹಿಸಿದ್ದರು.
ಚುನಾವಣೆ ಹಿನ್ನೆಲೆಯಲ್ಲಿ ಜು.8ರಂದು ದಕ್ಷಿಣ ಜಪಾನ್‌ನ ನಾರಾ ನಗರದಲ್ಲಿ ತಮ್ಮ ಡೆಮಾಕ್ರಾಟಿಕ್ ಲಿಬರಲ್ ಪಕ್ಷದ ಅಭ್ಯರ್ಥಿಯೊಬ್ಬರ ಪರ ಬಹಿರಂಗ ಪ್ರಚಾರದ ಸಂದರ್ಭದಲ್ಲಿ ಶಿಂಜೋ ಅಬೆ(67) ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.
ರಾಜಮನೆತದವರು ಅಲ್ಲದಿದ್ದರೂ ಶಿಂಜೋ ಅಬೆ ಅವರಿಗೆ ಸರ್ಕಾರಿ ಅಂತ್ಯಕ್ರಿಯೆ ನಡೆಸಿರುವುದು ಹಾಗೂ ಅಂತ್ಯಕ್ರಿಯೆಗೆ ಬರೋಬ್ಬರಿ 94 ಕೋಟಿ ರೂ. ವೆಚ್ಚ ಮಾಡಿರುವುದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.
#Watch: PM Narendra Modi pays final tribute to late former Japanese premier Shinzo Abe in Tokyo #Tokyo #Tribute #Japan #Japanese #ShinzoAbefuneral #NarendraModi #India #ViralVideo pic.twitter.com/5iWC0vEAZm
— Free Press Journal (@fpjindia) September 27, 2022
ಕಿಶಿದಾ- ಮೋದಿ ಮಾತುಕತೆ:
ಇದೇ ವೇಳೆ ಪ್ರಧಾನಿ ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂಡೋ-ಪೆಸಿಫಿಕ್ ಪ್ರದೇಶದ ಮುಕ್ತ ವ್ಯಾಪಾರ-ವಹಿವಾಟು ಹಾಗೂ ಭಾರತ ಮತ್ತು ಜಪಾನ್ ನಡುವೆ ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು. “ಅಬೆ ಒಬ್ಬ ಶ್ರೇಷ್ಠ ವ್ಯಕ್ತಿ. ಶಿಂಜೋ ಅಬೆ ಅವರ ಪತ್ನಿಗೆ ಭಾರತೀಯರ ಪರವಾಗಿ ಸಂತಾಪ ಸೂಚಿಸುತ್ತೇನೆ. ಅಬೆ ಅವರ ಕನಸಿನಂತೆ ಭಾರತ ಮತ್ತು ಜಪಾನ್ ನಡುವಿನ ಬಾಂಧವ್ಯ ಮತ್ತಷ್ಟು ಗಟಿಯಾಗುವ ನಿಟ್ಟಿನಲ್ಲಿ ಶ್ರಮಿಸಲಿದ್ದೇವೆ,’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.