ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್ ಆಟಗಾರನನ್ನು ಹೊಂದಿಲ್ಲ: ಶಾಹಿದ್ ಆಫ್ರಿದಿ
Team Udayavani, Sep 27, 2022, 8:10 PM IST
ನವದೆಹಲಿ: ಟಿ-20 ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಮುಂದಿನ ತಿಂಗಳು ( ಅ.16 ರಿಂದ) ಆಸ್ಟ್ರೇಲಿಯಾದಲ್ಲಿ ಟಿ-20 ಕದನ ಆರಂಭವಾಗಲಿದೆ. ಪಾಕಿಸ್ತಾನದ ಮಾಜಿ ಕ್ರಿಕಿಟಿಗ ಶಾಹಿದ್ ಆಫ್ರಿದಿ ಭಾರತದ ಆಟಗಾರನೊಬ್ಬನನ್ನು ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಟಿ-20 ಟ್ರೋಫಿ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಟೀಮ್ ಇಂಡಿಯಾ ಕೂಡ ಒಂದು. ಏಷ್ಯಾಕಪ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ-20 ಪಂದ್ಯಗಳಲ್ಲಿ ಭಾರತ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಭಾರತ ಭರ್ಜರಿಯಾಗಿ ಟಿ-20 ವಿಶ್ವಕಪ್ ಗೆ ತಯಾರಿ ನಡೆಸಿದೆ.
ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಇತ್ತೀಚಿನ ದಿನದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಪ್ರಚಂಡ ಫಾರ್ಮ್ ನಲ್ಲಿದ್ದಾರೆ. ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಆಫ್ರಿದಿ ಹಾರ್ದಿಕ್ ಪಾಂಡ್ಯ ಅವರನ್ನು ಹೊಗಳಿದ್ದಾರೆ.
ಖಾಸಗಿ ಟಿವಿ ವಾಹಿನಿಯಲ್ಲಿ ಮಾತಾನಾಡಿದ ಅವರು, ಹಾರ್ದಿಕ್ ಪಾಂಡ್ಯರಂತಹ ಆಲ್ ರೌಂಡರ್ ಆಟಗಾರ ನಮ್ಮಲ್ಲಿಲ್ಲ. ಪಾಂಡ್ಯರಂತಹ ಫಿನಿಶರ್ ಆಟಗಾರರು ಪಾಕ್ ನಲ್ಲಿಲ್ಲ. ನಮ್ಮಲ್ಲಿ ಫಿನಿಶರ್ ಆಗಿ ಆಸಿಫ್ ಆಲಿ, ಖುಷ್ ದಿಲ್, ನವಾಜ್ ಆಗಿ ಮಿಂಚುತ್ತಾರೆ ಅಂದುಕೊಂಡಿದ್ದೀವಿ ಆದರೆ ಅವರಿಂದ ಅದು ಸಾಧ್ಯವಾಗಿಲ್ಲ. ಶಾದಾಬ್ ಬೌಲಿಂಗ್ ಮಾಡುತ್ತಾರೆ. ಅವರು ಉತ್ತಮ ರೀತಿ ಬೌಲ್ ಮಾಡಿದರೆ ಪಾಕಿಸ್ತಾನ ಗೆಲ್ಲುತ್ತದೆ. ಈ ನಾಲ್ವರು ಆಟಗಾರರಲ್ಲಿ ಕನಿಷ್ಠ ಇಬ್ಬರಾದರೂ ಉತ್ತಮ ಪ್ರದರ್ಶನ ನೀಡಬೇಕೆಂದಿದ್ದಾರೆ.
ಇದರೊಂದಿಗೆ ಪಾಕಿಸ್ತಾನ ಟಿ-20 ವಿಶ್ವಕಪ್ ಗೆಲ್ಲಬೇಕಾದರೆ ಬೌಲಿಂಗ್ , ಬ್ಯಾಟಿಂಗ್ ಎರಡೂ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬೇಕೆಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.