![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 27, 2022, 9:00 PM IST
ಶಿವಮೊಗ್ಗ: ರಾಜ್ಯದಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್ಐ, ಎಸ್‌ಡಿಪಿಐ ಸೇರಿದಂತೆ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿ ಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಮುಂಜಾನೆಯಿಂದ ರಾಜ್ಯಾದ್ಯಂತ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆ ಪದಾಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಯಾ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗಿದೆ.
ರಾಜ್ಯದಲ್ಲಿ ಪಿಎಫ್‌ಐ ಸೇರಿದಂತೆ ಇತರ ಸಂಘಟನೆಗಳನ್ನು ನಿಷೇ ಧಿಸುವ ಅಧಿ ಕಾರ ಕೇಂದ್ರ ಸರ್ಕಾರದ್ದಾಗಿದೆ. ಅದಕ್ಕೆ ಪೂರಕವಾಗಿ ರಾಜ್ಯದಿಂದ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಪಿಎಫ್‌ಐ ಸಂಘಟನೆ ಶೀಘ್ರ ನಿಷೇಧ
ಶಿವಮೊಗ್ಗ: ಪಿಎಫ್‌ಐ ಸಂಘಟನೆ ನಿಷೇ ಧಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ 40ಕ್ಕೂ ಹೆಚ್ಚು ಕಡೆ ಪೊಲೀಸರ ದಾಳಿ ನಡೆಸಲಾಗಿದೆ. ಅನೇಕ ಪಿಎಫ್‌ಐ ಕಾರ್ಯಕರ್ತರು, ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪಿಎಫ್‌ಐ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಮಗ್ರ ತನಿಖೆ ಮಾಡಿದ ನಂತರ ಅವರ ದೇಶದ್ರೋಹಿ ಮತ್ತು ಕೇಂದ್ರ ಸರ್ಕಾರ ಉರುಳಿಸಲು ಮಾಡಿರುವ ಷಡ್ಯಂತ್ರ ಬಯಲಾಗಲಿದೆ ಎಂದರು.
ಪಿಎಫ್‌ಐ ಮತ್ತು ಎಸ್‌ಡಿಪಿಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡುವ ಕೆಲಸ ಮಾಡುತ್ತಿದೆ. ಗೋಹತ್ಯೆ ಜತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಈ ರಾಷ್ಟ್ರದ್ರೋಹಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಮರು ಕೂಡಲೇ ಖಂಡನೆ ಮಾಡಬೇಕು.
-ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.