ಕನ್ನಡ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದ ಸಿಎಂ ಬೊಮ್ಮಾಯಿ
Team Udayavani, Sep 28, 2022, 5:13 PM IST
ಪಣಜಿ : ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 1 ರಿಂದ 2 ಎಕರೆ ಜಾಗವನ್ನು ನೀಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ರವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸರ್ಕಾರವು ಗೋವಾದಲ್ಲಿ ಕನ್ನಡಿಗರ ಬಹು ವರ್ಷಗಳ ಬೇಡಿಕೆಯಾದ ಕನ್ನಡ ಭವನ ನಿರ್ಮಾಣಕ್ಕೆ ಪ್ರಸಕ್ತ 2022-23 ರ ಕರ್ನಾಟಕ ಬಜೆಟ್ ನಲ್ಲಿ ನಿಧಿ ಕಾಯ್ದಿರಿಸಲಾಗಿದ್ದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಿದೆ. ಈ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಹೆಚ್ಚಿನ ಪ್ರಯತ್ನ ನಡೆಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ರವರು ಗೋವಾ ಜಿಡಿಎ ಅಧ್ಯಕ್ಷ ಹಾಗೂ ವಾಸ್ಕೊ ಕ್ಷೇತ್ರದ ಶಾಸಕ ದಾಜಿ ಸಾಲಕರ್ ರವರನ್ನು ಭೇಟಿ ಮಾಡಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಗೋವಾ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಈಗಾಗಲೇ ವಾಸ್ಕೊದಲ್ಲಿ ಜುವಾರಿ ಕೆಮಿಕಲ್ಸ್ ಲಿಮಿಟೆಡ್ ಬಳಿ ಲಭ್ಯವಿರುವ ಜಾಗದಲ್ಲಿ 1 ಎಕರೆ ಜಾಗವನ್ನು ಕನ್ನಡ ಭವನ ನಿರ್ಮಾಣಕ್ಕೆ ನೀಡಬೇಕು ಎಂದು ಮನವಿ ಕೂಡ ಮಾಡಲಾಗಿದ್ದು, ಇದಕ್ಕೆ ಸರಿಯಾಗಿ ಸ್ಪಂದನೆ ಲಭಿಸಿಲ್ಲ. ಇದರಿಂದಾಗಿ ಗೋವಾ ಸರ್ಕಾರವು ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 1 ರಿಂದ 2 ರಕರೆ ಜಾಗವನ್ನು ಕಲ್ಪಿಸಿಕೊಡಬೇಕು. ಕರ್ನಾಟಕ ಸರ್ಕಾರವು ಕರ್ನಾಟಕದ ಮಂಗಳೂರಿನಲ್ಲಿ ಕೊಂಕಣಿ ಅಕಾಡಮಿಗಾಗಿ 3 ಕೋಟಿ ರೂ ಗಳನ್ನು ಬಜೇಟ್‍ನಲ್ಲಿ ಕಾಯ್ದಿರಿಸಿದೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕೊಂಕಣಿ ಭಾಷೆ ಪ್ರಚಾರ, ಪ್ರಸಾರಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಗೋವಾದಲ್ಲಿಯೂ ಲಕ್ಷಾಂತರ ಕನ್ನಡಿಗರು ನೆಲೆಸಿದ್ದು ಗೋವಾದ ರಾಜ್ಯ ಜನತೆಯೊಂದಿಗೆ ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಬೆರುತುಹೋಗಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ತಮ್ಮನ್ನು ಭೇಟಿ ಮಾಡಿ ಈ ನಿಟ್ಟಿನಲ್ಲಿ ಮನವಿಯನ್ನು ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದಿದ್ದಾರೆ.
ಕನ್ನಡ ಭವನದ ಕನಸು ನನಸಾಗಲಿದೆ…
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಮುಖ್ಯಮಂತ್ರಿಗಳು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕನ್ನಡ ಭವನಕ್ಕೆ ಜಾಗ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ್ದು, ಶೀಘ್ರದಲ್ಲಿಯೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಕನಸು ನನಸಾಗುವ ಭರವಸೆ ಗೋವಾ ಕನ್ನಡಿಗರಲ್ಲಿ ಮೂಡುವಂತಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮತ್ತು ಕನ್ನಡ ಭವನ ನಿರ್ಮಾಣಕ್ಕೆ ಹೆಚ್ಚಿನ ಪ್ರಯತ್ನ ನಡೆಸುತ್ತಿರುವ, ಬಿಜೆಪಿ ಗೋವಾ ಪ್ರಭಾರಿ ಸಿ.ಟಿ ರವಿಯವರಿಗೂ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್ ಅವರಿಗೂ ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸೂಕ್ತ ಜಾಗ ಕಲ್ಪಿಸಿಕೊಡಲಿದ್ದಾರೆ ಎಂಬ ಭರವಸೆಯೂ ನಮಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಪ್ರತಿಕ್ರಿಯೆ ನೀಡಿದ್ದಾರೆ.
ಕನ್ನಡ ಭವನ ನಿರ್ಮಾಣದ ಬಹು ವರ್ಷಗಳ ಬೇಡಿಕೆ ಈಡೇರಲಿ…
ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಗೋವಾ ಕನ್ನಡಿಗರ ಬಹು ವರ್ಷಗಳ ಬೇಡಿಕೆಯಾಗಿದೆ. ಗೋವಾ ಅಭಿವೃದ್ಧಿಗಾಗಿ ಶೃಮಿಸುತ್ತಿರುವ ಗೋವಾ ಕನ್ನಡಿಗರಿಗಾಗಿ ಗೋವಾ ಸರ್ಕಾರವು ಕನ್ನಡ ಭವನ ನಿರ್ಮಾಣಕ್ಕೆ ಸೂಕ್ತ ಜಾಗ ಕಲ್ಪಿಸಿಕೊಡಬೇಕು. ಕನ್ನಡ ಭವನ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರಿಗೂ ಮತ್ತು ಈ ನಿಟ್ಟಿನಲ್ಲಿ ಸತತ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಗೋವಾ ಪ್ರಭಾರಿ ಸಿ.ಟಿ ರವಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್ ರವರಿಗೂ ಸಮಸ್ತ ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.