ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್
Team Udayavani, Sep 28, 2022, 7:19 PM IST
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. ಅವರ ಬಗ್ಗೆ ಚರ್ಚಿಸುವ ಅವಶ್ಯಕತೆಯೇ ಇಲ್ಲ ಎಂದು ಛೇಡಿಸಿದರು.
40% ಹಣೆಪಟ್ಟಿ ಹೊತ್ತಿರುವ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ ಸದ್ಯ ಯಾರೊಬ್ಬರೂ ಹೋಗುವ ಸ್ಥಿತಿಯಲ್ಲಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 130, ಬಿಜೆಪಿ ಪಕ್ಷ 30 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಬಿಜೆಪಿಯವರ ಸರ್ವೆ ವರದಿಗಳೇ ತಿಳಿಸುತ್ತವೆ. ಹಾಗಾಗಿ ಕಾಂಗ್ರೆಸ್ ಪಕ್ಷದಿಂದ ಒಬ್ಬ ಶಾಸಕರು ಸಹ ಬಿಜೆಪಿ ಪಕ್ಷಕ್ಕೆ ಹೋಗಲ್ಲ. ಬಿಜೆಪಿ ಪಕ್ಷದಲ್ಲಿದ್ದ ಹೊಸಪೇಟೆಯ ಹೆಚ್.ಆರ್.ಗವಿಯಪ್ಪರೇ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಹಾಗಾಗಿ ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರಲು ನನ್ನನ್ನು ಸೇರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಸಂಪರ್ಕಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.