ವಿವಾಹಿತ / ಅವಿವಾಹಿತ ಸೇರಿ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ
ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆಯನ್ನು ನಾವು ಇಂದು ವಾಸ್ತವ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕಾಗಿದೆ
Team Udayavani, Sep 29, 2022, 11:55 AM IST
ನವದೆಹಲಿ: ವಿವಾಹಿತ ಅಥವಾ ಅವಿವಾಹಿತ ಸೇರಿದಂತೆ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಗುರುವಾರ (ಸೆಪ್ಟೆಂಬರ್ 29) ತೀರ್ಪು ನೀಡಿದೆ.
ಇದನ್ನೂ ಓದಿ:45 ವರ್ಷಗಳ ಬಳಿಕ ದಾದಿಯನ್ನು ಹುಡುಕಿಕೊಂಡು ಬೊಲಿವಿಯಾಗೆ ಹೊರಟ! ವಿಡಿಯೋ ನೋಡಿ
ವಿವಾಹಿತೆ ಎಂಬ ಕಾರಣದ ಹಿನ್ನೆಲೆಯಲ್ಲಿ ಬಲವಂತವಾಗಿ ಗರ್ಭಪಾತ ಮಾಡಿಸುವಂತಿಲ್ಲ. ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ವಿವಾಹಿತ ಅಥವಾ ಅವಿವಾಹಿತ ಮಹಿಳೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ನಿಯಮದ ಪ್ರಕಾರ 24 ವಾರಗಳ ಗರ್ಭಧಾರಣೆಯನ್ನು ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ವಿವಾಹಿತ ಮಹಿಳೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿದಲ್ಲಿ ಇದನ್ನು ಅತ್ಯಾಚಾರ ಎಂದು ಪರಿಗಣಿಸಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. 20ರಿಂದ 24 ವಾರಗಳ ಕಾಲಾವಧಿಯ ಗರ್ಭಾವಸ್ಥೆ ಹೊಂದಿರುವ ವಿವಾಹಿತ ಅಥವಾ ಅವಿವಾಹಿತ ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡದಿರುವುದು ಕಲಂ 14ರ ಅನ್ವಯ ಕಾನೂನು ಬಾಹಿರವಾಗಲಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಆಧುನಿಕ ಕಾಲಘಟ್ಟದಲ್ಲಿ ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆಯನ್ನು ನಾವು ಇಂದು ವಾಸ್ತವ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕಾಗಿದೆ. ಅಷ್ಟೇ ಅಲ್ಲ ಇಂದು ನಾವು ಹಳೆಯ ನಿಯಮಗಳೊಂದಿಗೆ ಅದನ್ನು ನಿರ್ಬಂಧಿಸುವುದು ಸೂಕ್ತವಲ್ಲ. ಕಾನೂನು ಯಾವತ್ತೂ ಸ್ಥಿರವಾಗಿರಬಾರದು ಮತ್ತು ಸಾಮಾಜಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥೈಸಬೇಕಾಗಿದೆ ಎಂದು ಸುಪ್ರೀಂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.