![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 29, 2022, 3:20 PM IST
ಹುಬ್ಬಳ್ಳಿ: ಪಿಎಫ್ಐ ಸಂಘಟನೆ ನಿಷೇಧ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ ನಿಷೇಧ ಕಾಂಗ್ರೆಸ್ ನವರಿಗೆ ನೋವು ತರಿಸಿದೆ. ಆದರೆ ಪಿಎಫ್ಐ ವಿರುದ್ಧ ಸಾಕ್ಷ್ಯಗಳು ಎಷ್ಟು ಬಲವಾಗಿವೆ ಎಂದರೆ, ಕಾಂಗ್ರೆಸ್ ನವರು ನಿಷೇಧ ಬಹಿರಂಗ ವಿರೋಧಿಸುವುದಕ್ಕೂ ಸಾಧ್ಯವಾಗದಾಗಿದೆ ಎಂದರು.
ಇದನ್ನೂ ಓದಿ:ಮತ್ತೆ ಪಿಎಸ್ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ
ಸಿದ್ದರಾಮಯ್ಯ ನೇತೃತ್ವದ ಸರಕಾರ ಪಿಎಫ್ಐ ವಿರುದ್ಧದ 175 ಕೇಸ್ ಗಳನ್ನು ಹಿಂತೆಗೆದುಕೊಂಡಿತ್ತು.ಅಷ್ಟರ ಮಟ್ಟಿಗೆ ಸಿದ್ದರಾಮಯ್ಯ ಅವರಿಗೆ ಪ್ರೀತಿ ಇತ್ತು. ಕಾಂಗ್ರೆಸ್ ಮತಬ್ಯಾಂಕ್ ಭಯ ಕಾಂಗ್ರೆಸ್ ಗೆ ಕಾಡುತ್ತಿದೆ. ಇದೇ ಕಾಂಗ್ರೆಸ್ ಮೂರು ಬಾರಿ ಆರ್ ಎಸ್ಎಸ್ ನ್ನು ನಿಷೇಧಿಸಿತ್ತು. ಸೂಕ್ತ ಸಾಕ್ಷ್ಯಾಧಾರಗಳು ದೊರಕಿರಲಿಲ್ಲ. ರಾಷ್ಟ್ರೀಯ ಹಿತಾಸಕ್ತಿ ಎಂದು ಬಂದಾಗ ಬಿಜೆಪಿ ಎಂದಿಗೂ ರಾಜಿ ಮಾಡಿಕೊಳ್ಳದು, ಪಿಎಫ್ಐ ನಂತೆ ಎಸ್ ಡಿಪಿಐ ವಿರುದ್ಧ ಕ್ರಮಕ್ಕೆ ಸಿದ್ದವಿದೆ. ಆದರೆ ಅದು ರಾಜಕೀಯ ಪಕ್ಷವಾಗಿದ್ದರಿಂದ ನಿಷೇಧ ಸುಲಭವಾಗದು. ಆದರೆ ಕಾಂಗ್ರೆಸ್ ಗೆ ರಾಜಕಾರಣ, ಮತಬ್ಯಾಂಕ್ ಮುಖ್ಯವಾಗಿದೆ ಎಂದರು.
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಬಗ್ಗೆ ಕೇಂದ್ರ ಸರಕಾರ ಸಕಾರಾತ್ಮಕ ಚಿಂತನೆ ಹೊಂದಿದೆ. ಪ್ರಕರಣ ಕೋರ್ಟ್ ನಲ್ಲಿದ್ದು, ಕೋರ್ಟ್ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.