ರಾಜಸ್ಥಾನ ಸಿಎಂ ಭವಿಷ್ಯ 2 ದಿನದಲ್ಲಿ ನಿರ್ಧಾರ
Team Udayavani, Sep 30, 2022, 6:30 AM IST
ನವದೆಹಲಿ: ಭಾರೀ ಹೈಡ್ರಾಮಾಗಳಿಗೆ ಸಾಕ್ಷಿಯಾದ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಅವರು ಸಿಎಂ ಆಗಿ ಮುಂದುವರಿಯುತ್ತಾರೋ, ಇಲ್ಲವೋ ಎಂಬುದು ಇನ್ನೆರಡು ದಿನಗಳಲ್ಲಿ ಸ್ಪಷ್ಟವಾಗಲಿದೆ.
ಗುರುವಾರ ಗೆಹ್ಲೋಟ್ ಅವರು ದೆಹಲಿಗೆ ಆಗಮಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿ ವಾಪಸಾಗಿದ್ದಾರೆ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ, ಇತ್ತೀಚೆಗೆ ಜೈಪುರದಲ್ಲಿ ನಡೆದ ಘಟನೆಗಳಿಗಾಗಿ ನಾನು ಸೋನಿಯಾರಲ್ಲಿ ಕ್ಷಮೆ ಯಾಚಿಸಿದ್ದೇನೆ ಎಂದೂ ತಿಳಿಸಿದ್ದಾರೆ.
ಅತ್ತ ಗೆಹ್ಲೋಟ್ ರಾಜಸ್ಥಾನಕ್ಕೆ ವಾಪಸಾಗುತ್ತಿದ್ದಂತೆ, ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ದೆಹಲಿಗೆ ದೌಡಾಯಿಸಿದ್ದಾರೆ. ಗುರುವಾರ ರಾತ್ರಿ 10 ಜನಪಥ್‌ನಲ್ಲಿ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಅದರಲ್ಲಿ ಪೈಲಟ್, ಕೆ.ಸಿ.ವೇಣುಗೋಪಾಲ್ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಮಾತನಾಡಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜಸ್ಥಾನ ಸಿಎಂ ಹುದ್ದೆ ಕುರಿತು ಇನ್ನು ಒಂದೆರಡು ದಿನಗಳಲ್ಲಿ ಸೋನಿಯಾಗಾಂಧಿ ಅವರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ.
ನಮ್ಮದು ಫ್ರೆಂಡ್ಲಿ ಫೈಟ್! :
ಎಐಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ದಿಗ್ವಿಜಯ್ ಸಿಂಗ್ ಹಾಗೂ ಶಶಿತರೂರ್ ಅವರು ಗುರುವಾರ ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಉಭಯ ನಾಯಕರು, “ನಮ್ಮದು ಪ್ರತಿಸ್ಪರ್ಧಿಗಳ ನಡುವಿನ ಹೋರಾಟವಲ್ಲ. ಬದಲಾಗಿ, ಸಹೋದ್ಯೋಗಿಗಳ ನಡುವಿನ ಫ್ರೆಂಡ್ಲಿ ಫೈಟ್ ಆಗಿರಲಿದೆ’ ಎಂದಿದ್ದಾರೆ. ಶುಕ್ರವಾರ ಇವರಿಬ್ಬರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನು, ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಕೆ.ಎನ್.ತ್ರಿಪಾಠಿ ಅವರೂ ನಾಮಪತ್ರದ ಅರ್ಜಿಯನ್ನು ಪಡೆದುಕೊಂಡಿದ್ದು, ಸ್ಪರ್ಧೆಯ ಸುಳಿವು ನೀಡಿದ್ದಾರೆ. ಮತ್ತೂಂದೆಡೆ, ಜಿ-23 ನಾಯಕರಲ್ಲಿ ಒಬ್ಬರಾದ ಮುಕುಲ್ ವಾಸ್ನಿಕ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.