ಕೋರ್ಟ್ ಎನ್ನುವುದು ನಿಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವಂತಹ ಸ್ಥಳವಲ್ಲ: ಸುಪ್ರೀಂ
Team Udayavani, Sep 30, 2022, 9:45 PM IST
ನವದೆಹಲಿ: “ನ್ಯಾಯಾಲಯ ಎನ್ನುವುದು ನಿಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವಂತಹ ಸ್ಥಳವಲ್ಲ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಪ್ರದೇಶದ ಜನ ವಿಕಾಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.
ವಿದ್ಯುನ್ಮಾನ ಮತ ಯಂತ್ರ(ಇವಿಎಂ)ವನ್ನು ಚುನಾವಣಾ ಆಯೋಗದ ಬದಲು ಕಂಪನಿಗಳು ನಿರ್ವಹಣೆ ಮಾಡುತ್ತಿವೆ ಎಂದು ಆರೋಪಿಸಿ ಜನ ವಿಕಾಸ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಎ.ಎಸ್.ಒಕಾ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿದೆ.
“ಚುನಾವಣೆಯಲ್ಲಿ ಜನರ ಗಮನ ಸೆಳೆಯುವಲ್ಲಿ ವಿಫಲವಾದವರು ಚುನಾವಣಾ ಫಲಿತಾಂಶದ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ಆ ಮೂಲಕ ಜನರ ಗಮನ ಸೆಳೆಯಲು ಯತ್ನಿಸುತ್ತಾರೆ. ಆದರೆ ಇದು ಕಂಡ ಕಂಡವರೆಲ್ಲ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವಂತಹ ಸ್ಥಳವಲ್ಲ’ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.