ಖರ್ಗೆ ಅಧ್ಯಕ್ಷರಾದರೂ ರಿಮೋಟ್ ಕಂಟ್ರೋಲ್‌ನಲ್ಲೇ ಇರಬೇಕು: ಸಚಿವ ಪ್ರಹ್ಲಾದ ಜೋಶಿ
Team Udayavani, Sep 30, 2022, 10:15 PM IST
ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್ ಕಂಟ್ರೋಲ್‌ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್‌ನಲ್ಲಿ ಯಾರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ರಿಮೋಟ್ ಕಂಟ್ರೋಲ್‌ನಲ್ಲೇ ಇರಬೇಕು.
ದಶಕಗಳ ಕಾಲ ದೇಶದ ಪ್ರಧಾನಿ ಆಗಿದ್ದ ಮನಮೋಹನಸಿಂಗ್ ಆಡಳಿತವನ್ನು ದೇಶದ ಜನತೆ ಕಣ್ಣಾರೆ ಕಂಡಿದ್ದಾರೆ. ರಾಜಕೀಯ ಗಂಭೀರತೆ ಇಲ್ಲದ ರಾಹುಲ್ ಗಾಂಧಿ ಜವಾಬ್ದಾರಿ ಇಲ್ಲದ ವ್ಯಕ್ತಿ. ಇಂತಹ ವ್ಯಕ್ತಿ ಭಾರತ ಜೋಡೋ ಎಂದು ಪಾದಯಾತ್ರೆ ಹೊರಟರೆ ಜನತೆ ಸ್ಪಂದಿಸಲು ಸಾಧ್ಯವಿಲ್ಲ. ರಾಜಕೀಯ ಲಾಭಕ್ಕಾಗಿ ನಡೆಸುವ ಇಂಥ ಬೆಳವಣಿಗೆಗೆ ಜನರು ಮರುಳಾಗಲ್ಲ ಎಂದು ಹೇಳಿದರು.
ಒಂದೊಮ್ಮೆ ಕಾಂಗ್ರೆಸ್ ನಾಯಕರು ಅಲ್ಲಲ್ಲಿ ಚುನಾವಣೆಗಳಲ್ಲಿ ವಿಜಯ ಸಾಧಿಸಿದ್ದಾರೆ ಎಂದಾದರೆ ಅದು ಸ್ಥಳೀಯವಾಗಿ ಅವರು ಹೊಂದಿರುವ ರಾಜಕೀಯ ಹಿಡಿತದಿಂದಲೇ ಹೊರತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಇತರೆ ನಾಯಕರ ನಾಯಕತ್ವದಿಂದ ಅಲ್ಲ. ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಪಕ್ಷ ಹಾಗೂ ಸರ್ಕಾರಗಳು ಜನತೆಯ ಹಿತಕ್ಕಾಗಿ ರೂಪಿಸಿರುವ ಯೋಜನೆಗಳ ಅನುಷ್ಠಾನದತ್ತ ಚಿತ್ತ ನೆಟ್ಟಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.