ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ
Team Udayavani, Oct 1, 2022, 4:51 PM IST
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಈ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದು ಹೇಳಿದರು.
ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ತಹಶೀಲ್ದಾರ ಕಛೇರಿ ಹತ್ತಿರ ಮೂರು ಕೊಠಡಿಗಳನ್ನು ನೀಡಲಾಗಿದೆ. ಜೊತೆಗೆ ಫರ್ನಿಚರ್ ಕಾಮಗಾರಿಯು ಈಗಾಗಲೇ ಮುಗಿದಿದೆ. ಮೂಡಲಗಿ ಹೊಸ ತಾಲೂಕು ರಚನೆಯಾದ ನಂತರ ಸಾರ್ವಜನಿಕರ ಬೇಡಿಕೆ ದಿನೇ ದಿನೇ ಹೆಚ್ಚುತ್ತಿತ್ತು. ಗೋಕಾಕದಲ್ಲಿ ರೈತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿರುವುದರಿಂದ ಮೂಡಲಗಿ ತಾಲೂಕಿನ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿಯೇ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭವಾಗಲಿದೆ. ಇಡೀ ತಾಲೂಕಿನ ರೈತರ ಸೇವೆಗೆ ಕಛೇರಿಯು ಅಣಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಇದನ್ನೂ ಓದಿ : ಭೂತಾನ್‌ನಿಂದ ಅಡಿಕೆ ಆಮದು ಆತಂಕ ಬೇಡ: ಸಚಿವೆ ಶೋಭಾ ಕರಂದ್ಲಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.