ಶಿಕ್ಷಕರ ಬೇಡಿಕೆ ಈಡೇರಿಕೆಗೆ ಯತ್ನ
ಸೇವೆಯಿಂದ ನಿವೃತ್ತರಾದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು
Team Udayavani, Oct 1, 2022, 6:27 PM IST
ಗುಳೇದಗುಡ್ಡ: ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ನೆಹರು ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಡಾ| ಎಸ್.ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷಗಳ ಕೋವಿಡ್ ಸಂದರ್ಭದಲ್ಲಿ ಸುಮಾರು 267 ಜನ ಶಿಕ್ಷಕರು ನಿಧನರಾಗಿದ್ದು, ಪ್ರತಿ ಶಿಕ್ಷಕರಿಗೆ 10 ಸಾವಿರ ರೂ. ಸಹಾಯಧನ ನೀಡುತ್ತೇನೆ ಎಂದು ಭರವಸೆ ನೀಡಿದ್ದೆ, ಇದನ್ನು ಶೀಘ್ರ ವಿತರಣೆ ಮಾಡುತ್ತೇನೆ ಎಂದರು. ಬಾಗಲಕೋಟೆ ಜಿಲ್ಲೆಗೆ 50 ಲ್ಯಾಪ್‌ಟಾಪ್ ಕೊಡಲಾಗುತ್ತಿದೆ.
33 ಬ್ಲಾಕ್‌ಗಳಿಗೆ ಶಾಲಾ ಕೊಠಡಿ ಮಂಜೂರು ಮಾಡಲು ಮನವಿ ಮಾಡಲಾಗಿದೆ. ಬಿಇಒ ಅವರ ಮೂಲಕ ಬೇಡಿಕೆ ಸಲ್ಲಿಸಿದ ನಂತರ ಕೊಠಡಿ ಮಂಜೂರು ಮಾಡಲಾಗುವುದು. ಶಿಕ್ಷಕರ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಪರಿಹಾರ ನೀಡಲು ದಿನಾಂಕ ನಿಗದಿಗೊಳಿಸಲು ತಹಶೀಲ್ದಾರ್ ಮತ್ತು ತಾಪಂ ಇಒ ಅವರಿಗೆ ಸೂಚಿಸಿದರು.
ವಿಜಯನಗರ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅಕ್ಕಮಹಾದೇವಿ ಸರಗಣಾಚಾರಿ ಉಪನ್ಯಾಸ ನೀಡಿದರು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಮತ್ತು ಸೇವೆಯಿಂದ ನಿವೃತ್ತರಾದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು.
ಗುಳೇದಗುಡ್ಡ ಪುರಸಭೆ ಅಧ್ಯಕ್ಷೆ ಯಲ್ಲವ್ವ ಗೌಡರ, ಹೊಳೆಹುಚ್ಚೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೊಳಬಸು ಶೆಟ್ಟರ, ಸಂಜಯ ಬರಗುಂಡಿ, ಪ್ರೊಬೆಷನರಿ ತಹಶಿಲ್ದಾರ ಮಲ್ಲಣ್ಣ ಯಳಗುಂಡಿ, ತಹಶೀಲ್ದಾರ್ ರೇಣುಕಾ ಪ್ರಸಾದ, ತಾಲೂಕಾ ಸರಕಾರಿ ನೌಕರರ ಅಧ್ಯಕ್ಷ ರಮೇಶ ಅಥಣಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಬಾಗೆನ್ನವರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಆರ್.ಎಸ್.ಆದಾಪೂರ, ದೆ„ಹಿಕ ಶಿಕ್ಷಣ ಪರಿವೀಕ್ಷಕಿ
ಬಿ.ವೈ.ಕಂದಗನೂರ, ಬಸವರಾಜ ಹಳಗೇರಿ, ತಾ.ಪಂ.ಇಒ ಮಲ್ಲಿಕಾರ್ಜುನ ಕಲಾದಗಿ, ಸತೀಶ ನಾಯಕ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಶೈಲ ತೋಟಗೇರ, ವೈ.ಎಸ್.ಮಜ್ಜಗಿ, ಎಂ.ಪಿ.ಮಾಗಿ, ಭೀಮೇಶ ಚಿಮಲ್, ದೇವರಾಜ ಅಡ್ಡಿ, ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಬಿ.ಎಸ್.ಅಬ್ಬಿಗೇರಿ, ಆನಂದಗೌಡ ಗೌಡರ ಹಾಜರಿದ್ದರು. ಶಿಕ್ಷಣ ಸಂಯೋಜಕ ರವಿ ಗಿರಿಯಪ್ಪ ಗೌಡರ ಸ್ವಾಗತಿಸಿದರು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿ ಕಾರಿ ಎಂ.ಬಿ.ದೊಡ್ಡಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇನ್ನೋರ್ವ ಶಿಕ್ಷಣ ಸಂಯೋಜಕ ವಿ.ಎಸ್.ಹಿರೇಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.