ಉಡುಪಿ: ಗಾಂಜಾ ಪ್ರಕರಣ; ಆರೋಪಿಗೆ 3 ವರ್ಷ ಕಠಿನ ಕಾರಾಗೃಹ ಶಿಕ್ಷೆ
Team Udayavani, Oct 1, 2022, 7:44 PM IST
ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್ ದಿಗಂಬರ್ ಲೋಖಂಡೆ(28)ಗೆ 3 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಶಾಂತಿಬಾಯಿ ಅವರು ವಾದ ಮಂಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನಿಶಾ ಜೇಮ್ಸ್ ಅವರ ನಿರ್ದೇಶನದಲ್ಲಿ ಅಂದಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ 2019ರ ಜು.24ರಂದು ಅಂದಿನ ಸೆನ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷಕ ಸೀತಾರಾಮ ಅವರು ಇಂದ್ರಾಳಿ ರೈಲ್ವೇ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು ಗಾಂಜಾ ತಂದಿದ್ದ ಆರೋಪಿಯನ್ನು ಬಂಧಿಸಿದ್ದರು. ಈತ ಸುಮಾರು 40 ಸಾವಿರ ರೂ.ಮೌಲ್ಯದ 2 ಕಿಲೋ 20 ಗ್ರಾಂ ತೂಕದ ಗಾಂಜಾವನ್ನು ಮತ್ತು 5 ಸಾವಿರ ರೂ.ಮೌಲ್ಯದ ಮೊಬೈಲ್ ಹ್ಯಾಂಡ್ಸೆಟ್ ಸಹಿತ ಒಟ್ಟು 45 ಸಾವಿರ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದರು.
ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಮುಂದುವರಿಸಿದ ಸೆನ್ ಅಪರಾಧ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾರಾಯಣ ಅವರು 2020ರ ಮಾ.23ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.