ರಷ್ಯಾ-ಉಕ್ರೇನ್ ಬಿಕ್ಕಟ್ಟು ಚರ್ಚೆ: ಭಾರತ ಪ್ರತಿನಿಧಿ ಗೈರು
Team Udayavani, Oct 1, 2022, 9:15 PM IST
ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶನಿವಾರ ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆದಿದೆ. ಅದರಲ್ಲಿ ಭಾರತದ ಪ್ರತಿನಿಧಿ ಗೈರುಹಾಜರಾಗಿದ್ದರು.
ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ವಿಲೀನಗೊಳಿಸಿರುವುದಾಗಿ ರಷ್ಯಾ ಘೋಷಿಸಿಕೊಂಡ ಬೆನ್ನಲ್ಲೇ ಈ ಸಭೆ ನಡೆದಿದ್ದು, ಈ ವಿಲೀನವನ್ನು ಕಾನೂನುಬಾಹಿರ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.
15 ಸದಸ್ಯರಲ್ಲಿ 10 ಸದಸ್ಯರು ಇದಕ್ಕೆ ಒಪ್ಪಿದ್ದಾರೆ. ಆದರೆ ಶಾಶ್ವತ ಸದಸ್ಯವಾಗಿರುವ ರಷ್ಯಾ ಈ ನಿರ್ಧಾರಕ್ಕೆ ತಡೆಹಿಡಿದಿದೆ. ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಂಬೋಜ್, “ಉಕ್ರೇನ್‌ನಲ್ಲಾಗುತ್ತಿರುವ ಬೆಳವಣಿಗೆಯಿಂದಾಗಿ ಭಾರತ ನೊಂದಿದೆ.
ಜೀವವನ್ನು ತೆಗೆಯುವಂತಹ ಯಾವುದೇ ನಿರ್ಧಾರ ಸೂಕ್ತವಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.