ಸಂಕಷ್ಟಕ್ಕೆ ಸಿಲುಕಿದ ಮಕ್ಕಳ ನೆರವಿಗೆ ಧಾವಿಸಿ
Team Udayavani, Oct 2, 2022, 5:22 PM IST
ತುಮಕೂರು: ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಕ್ಕಳಿಗೆ ರಕ್ಷಣೆ, ಆಪ್ತ ಸಮಾಲೋಚನೆ, ಹಾಗೂ ಉಚಿತ ಕಾನೂನು ನೆರವು ನೀಡಿ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸೂಚಿಸಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದ ಅವರು, ವಿವಿಧ ರೀತಿಯ ಸಂತ್ರಸ್ತ ಮಕ್ಕಳಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಎಚ್‌ಐವಿ ಭಾದಿತ ಮಕ್ಕಳಿಗೆ ಆರ್ಥಿಕ ಸೌಲಭ್ಯ ಒದಗಿಸಲು ವಿಶೇಷ ಪಾಲನಾ ಯೋಜನೆ, ಒಂಟಿ ಪೋಷಕರನ್ನು ಹೊಂದಿರುವ ಮಕ್ಕಳಿಗಾಗಿ ಪ್ರಾಯೋಜಿತ ಕಾರ್ಯಕ್ರಮವಿದೆ. ಉಪಕಾರ ಯೋಜನೆ, ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಕೋವಿಡ್ ಸೋಂಕಿನ ಕಾರಣದಿಂದ ಪೋಷಕರಿಬ್ಬರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಆರ್ಥಿಕ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ಜಾರಿಗೊಳಿಸಿದೆ. ಸಂತ್ರಸ್ತ ಮಕ್ಕಳನ್ನು ಗುರುತಿಸಿ ಸೌಲಭ್ಯ ಕಲ್ಪಿಸಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಆರ್ಥಿಕ ಸೌಲಭ್ಯ: ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿ ಕೋವಿಡ್-19 ಸೋಂಕಿನಿಂದ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಆರ್ಥಿಕ ಸೌಲಭ್ಯ ನೀಡಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ಗುರುತಿಸಿರುವ ಇಬ್ಬರು ಮಕ್ಕಳಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳನ್ನು ದತ್ತು ನೀಡುವಾಗ ಜಿಲ್ಲಾಧಿಕಾರಿ, ಸಿಇಒ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಪೈಕಿ ಯಾರಾದರೂ ಒಬ್ಬರ ಸಮ್ಮುಖದಲ್ಲಿ ನೀಡುವುದು ಅವಶ್ಯ ಎಂದರು.
ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಶೀಘ್ರ ನ್ಯಾಯ ಒದಗಿಸುವಂತಹ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾ. ನೂರುನ್ನಿಸಾ ತಿಳಿಸಿದರು.
ಭಿಕ್ಷಾಟನೆಯಲ್ಲಿ ತೊಡಗಿರುವ, ಚಿಂದಿ ಆಯುವ, ಬೀದಿ ಬದಿಯ ಅನಾಥ ಮಕ್ಕಳನ್ನು ಗುರುತಿಸಿ ಅವರನ್ನು ರಕ್ಷಣೆ ಮಾಡಿ ಪುನರ್ವಸತಿ ಕಲ್ಪಿಸಬೇಕಲ್ಲದೇ ಹತ್ತಿರವಿರುವ ವಸತಿ ಶಾಲೆಗಳಿಗೆ ದಾಖಲಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಪ್ರಕರಣ ದಾಖಲಿಸಿ: ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಿರುವ ಕಡೆ ಅಧಿಕಾರಿಗಳು ಕಣ್ಣಿಟ್ಟಿರ ಬೇಕು. ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಸ್ಥಳೀಯ ಮಟ್ಟದ ಅಧಿಕಾರಿಗಳು, ಆಶಾ, ಅಂಗನ ವಾಡಿ ಕಾರ್ಯಕರ್ತರು ಹೆಚ್ಚಿನ ನಿಗಾವಹಿಸಿ ಬಾಲ್ಯ ವಿವಾಹಗಳನ್ನು ತಡೆದು ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಟಿಎಸ್‌ಎಲ್ ಪ್ರೇಮಾ, ಕಾರ್ಮಿಕಾಧಿಕಾರಿ ಡಾ.ರಮೇಶ್, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಎನ್.ಅಂಜನಪ್ಪ, ಜಿಲ್ಲೆಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.
59 ಇತ್ಯರ್ಥ, 78 ಪ್ರಕರಣ ಬಾಕಿ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ ಸಭೆಗೆ ಮಾಹಿತಿ ನೀಡುತ್ತಾ, ಬಾಲನ್ಯಾಯ ಮಂಡಳಿ ಮುಂದೆ ಸೆಪ್ಟೆಂಬರ್ ಅಂತ್ಯದವರೆಗೆ ಒಟ್ಟು 137 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 59 ಇತ್ಯರ್ಥಗೊಂಡು, 78 ಬಾಕಿ ಇರುತ್ತವೆ. ಇದೇ ಅವಧಿಯಲ್ಲಿ ಪೋಕೊÕà ಕಾಯ್ದೆಯಡಿ ದಾಖ ಲಾದ 178 ಪ್ರಕರಣಗಳ ಪೈಕಿ 21 ಖುಲಾಸೆ ಗೊಂಡು 2 ರಲ್ಲಿ ಶಿಕ್ಷೆಯಾಗಿ ಒಟ್ಟು 23 ಇತ್ಯರ್ಥ ಗೊಂಡಿದ್ದು, 155 ಪ್ರಕರಣ ಬಾಕಿ ಇರುತ್ತವೆ ಎಂದು ತಿಳಿಸಿದರು. ಬೀದಿ ಬದಿ ಮಕ್ಕಳನ್ನು ರಕ್ಷಣೆ ಮಾಡಿ ಪುನರ್ವಸತಿಗೊಳಿಸಿದ ವಿವರ ನೀಡಿದ ಅವರು ಏಪ್ರಿಲ್ 2022ರಿಂದ ಈವರೆಗೆ ತುಮಕೂರು ನಗರದ ವಿವಿಧ ವೃತ್ತಗಳಲ್ಲಿ ಹಾಗೂ ಕುಣಿಗಲ್ ಪಟ್ಟಣದಲ್ಲಿ ಕಾರ್ಯಾಚಾರಣೆ ಮಾಡಲಾಗಿದ್ದು, ಇಬ್ಬರು ಮಕ್ಕಳನ್ನು ಮಕ್ಕಳ ಪಾಲನಾ ಸಂಸ್ಥೆಗೆ ಹಾಗೂ ತಾಯಿಯೊಂದಿಗೆ ಇದ್ದ ಮಗುವನ್ನು ಸ್ವಾಧಾರ ಕೇಂದ್ರಕ್ಕೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.