ಮುಂಬಯಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಸೇತುವೆ; ಚಾಂದಿನಿ ಚೌಕ್ ಸೇತುವೆ ನೆಲಸಮ
Team Udayavani, Oct 2, 2022, 8:15 PM IST
ಮುಂಬೈ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಅವಳಿ ಕಟ್ಟಡವನ್ನು ನೆಲಸಮಗೊಳಿಸಿದ ಬೆನ್ನಲ್ಲೇ, ಮಹಾರಾಷ್ಟ್ರದ ಪುಣೆಯ ಚಾಂದಿನಿ ಚೌಕ್‌ನಲ್ಲಿದ್ದ ಹಳೆಯ ಸೇತುವೆಯನ್ನು ಶನಿವಾರ ಮಧ್ಯರಾತ್ರಿ ನೆಲಸಮ ಮಾಡಲಾಗಿದೆ. ಸೇತುವೆಯನ್ನು ಮುಂಬೈ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್4ನಲ್ಲಿ 90ರ ದಶಕದಲ್ಲಿ ನಿರ್ಮಿಸಲಾಗಿತ್ತು.
600ಕೆ.ಜಿ ಸ್ಫೋಟಕವನ್ನು ಬಳಸಿಕೊಂಡು ಶನಿವಾರ ರಾತ್ರಿ 1 ಗಂಟೆಯ ಸಮಯಕ್ಕೆ ಸೇತುವೆಯನ್ನು ನೆಲಸಮಗೊಳಿಸಲಾಗಿದೆ. ಸೇತುವೆಯ ಪಳೆಯುಳಿಕೆಗಳನ್ನೆಲ್ಲ ಸ್ಥಳಾಂತರ ಮಾಡಿದ ನಂತರ ಭಾನುವಾರ ಬೆಳಗ್ಗೆ 10 ಗಂಟೆಯ ಸಮಯಕ್ಕೆ ಹೆದ್ದಾರಿಯಲ್ಲಿ ಮತ್ತೆ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಅವಳಿ ಕಟ್ಟಡವನ್ನು ನೆಲಸಮ ಮಾಡಿದ್ದ ಎಡಿಫೈಸ್ ಸಂಸ್ಥೆಯೇ ಈ ಸೇತುವೆಯನ್ನೂ ವ್ಯವಸ್ಥಿತವಾಗಿ ಕೆಡವಿದೆ.
ಸೇತುವೆ ಹಳೆಯದ್ದಾಗಿದ್ದರಿಂದಾಗಿ ಅದರ ಮೇಲೆ ವಾಹನ ಓಡಾಟ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಸೇತುವೆಯ ಕೆಳಭಾಗದಲ್ಲಿ ಅತಿ ಹೆಚ್ಚು ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.