ಆರು ತಿಂಗಳ ಬಳಿಕ ಬದನವಾಳು ಅಭಿವೃದ್ಧಿ: ರಾಹುಲ್ ಗಾಂಧಿ
ಖಾದಿ ಗ್ರಾಮೋದ್ಯೋಗ ಕೇಂದ್ರದ ನೌಕರರ ಜತೆ ಸಂವಾದ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ
Team Udayavani, Oct 2, 2022, 11:58 PM IST
ನಂಜನಗೂಡು: ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಇನ್ನು ಆರು ತಿಂಗಳ ಬಳಿಕ ಬದನವಾಳಿನ ಅಭಿವೃದ್ಧಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ರವಿವಾರ ನಂಜನಗೂಡು ತಾಲೂಕಿನ ಬದನವಾಳಿಗೆ ಆಗಮಿಸಿದ ಅವರು ಗಾಂಧಿ ಜಯಂತಿ ಪ್ರಯುಕ್ತ ಅಲ್ಲಿನ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿಗೆ ಗೌರವ ಸಲ್ಲಿಸಿ ಭಜನೆಯಲ್ಲಿ ಭಾಗಿಯಾದರು. ಅನಂತರ ಖಾದಿ ಗ್ರಾಮೋದ್ಯೋಗ ಕೇಂದ್ರದ ನೌಕರ ರೊಡನೆ ಸಂವಾದ ನಡೆಸಿ, ಇನ್ನು 6 ತಿಂಗಳ ಬಳಿಕ ನಿಮ್ಮ ಕಷ್ಟ ಪರಿಹಾರವಾಗಲಿದೆ. ಆಗ ಈ ಗ್ರಾಮೋ ದ್ಯೋಗ ಕೇಂದ್ರಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು ಎಂದು ಭರವಸೆ ನೀಡಿದರು.
ನಮ್ಮ ಕಷ್ಟ ಕೇಳುವವವರೇ ಇಲ್ಲ ಎಂದು ಅಲ್ಲಿನ ಮಹಿಳಾ ಕಾರ್ಮಿಕರು ರಾಹುಲ್ ಗಾಂಧಿ ಅವರಲ್ಲಿ ಹೇಳಿಕೊಂಡಾಗ ಈ ಭರವಸೆ ನೀಡಿದರು.
ರಾಹುಲ್ ಗಾಂಧಿ ಜತೆಗೆ ಸಂವಾದ ಮುಗಿಸಿ ಹೊರಬಂದ 75 ವರ್ಷದ ಗೌರಮ್ಮ ಮಾತನಾಡಿ, ಒಂದು ದಾರದ ಉಂಡೆ ಸಿದ್ಧಪಡಿಸಿದ್ದಕ್ಕೆ 10 ಪೈಸೆ ನೀಡುತ್ತಿದ್ದ ಕಾಲವನ್ನು ನೆನಪಿಸಿಕೊಂಡು ಇಷ್ಟು ವರ್ಷ ಕಾದಿದ್ದೇವೆ. ಇನ್ನೂ ಆರು ತಿಂಗಳು ಕಾಯುತ್ತೇವೆ ಎಂದರು. ಎಂಟು ತಿಂಗಳಿಂದ ಕೆಲಸವೂ ಇಲ್ಲ, ಸಂಬಳವೂ ಇಲ್ಲ ಎಂದು ರಾಹುಲ್ ಗಾಂಧಿ ಅವರಲ್ಲಿ ಅರಿಕೆ ಮಾಡಿಕೊಂಡಿದ್ದೇವೆ ಎಂದು ಮಸಣಮ್ಮ ಎಂಬವರು ಹೇಳಿದರು.
ಮೈಸೂರಿನಿಂದ ಆಗಮಿಸಿದ್ದ ಬಾಣಸಿಗರು ಖಾದಿ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಜನರಿಗೆ ಜೋಳದ ರೊಟ್ಟಿ, ಬಾತ್, ಪಾಯಸ, ಅನ್ನ ಸಾಂಬಾರು, ರಸಂ, ಮಜ್ಜಿಗೆ ಮತ್ತು ಮೈಸೂರು ಪಾಕ್‌ನೊಂದಿಗೆ ಭೂರಿ ಭೋಜನ ಉಣ ಬಡಿಸಿದರು.
ಖಾದಿ ಗ್ರಾಮೋದ್ಯೋಗದ ಆವರಣ ರವಿವಾರ ಖಾದಿ ಪಂಚೆ, ಶರ್ಟ್, ಟೋಪಿಗಳಿಂದಲೇ ತುಂಬಿ ಹೋಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಡಾ| ಎಚ್.ಸಿ.ಮಹದೇವಪ್ಪ, ಮಾಜಿ ಸಂಸದ ಆರ್. ಧ್ರುವನಾರಾಯಣ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ಅವರು ಖಾದಿ ಟೋಪಿಯಲ್ಲೇ ಕಾಣಿಸಿಕೊಂಡರು.
ಫಲವನ್ನುಅವರೇ ಅನುಭವಿಸುತ್ತಾರೆ ಬಿಜೆಪಿ ನಾಯಕರು ಸೋಮವಾರ ಬೆಳಗ್ಗೆ ಮೈಸೂರಿನಲ್ಲಿ ಭಾರತ ಐಕ್ಯತಾ ಯಾತ್ರೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಅಹಿತಕರ ಘಟನೆಗೆ ಕಾರಣರಾದರೆ ಇದರ ಫಲವನ್ನು ಮುಂದೆ ಅವರೇ ಅನುಭವಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.
ರವಿವಾರ ಬದನವಾಳಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರು ಮೈಸೂರಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸುತ್ತಾರೆಂಬ ಮಾಹಿತಿ ಬಂದಿದೆ. ನಾನು ಪೊಲೀಸ್ ಆಯುಕ್ತರ ಜತೆ ಮಾತ ನಾಡುತ್ತೇನೆ. ಕಪ್ಪು ಬಾವುಟ, ಮೊಟ್ಟೆ, ಕಲ್ಲು, ಧಿಕ್ಕಾರ ಕೂಗುವುದು ಇದೆಲ್ಲ ಮಾಡಿದರೆ ಇದರ ಫಲವನ್ನು ಮುಂದೆ ಅವರೇ ಅನುಭವಿಸುತ್ತಾರೆ ಎಂದರು.
ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಮಾತನಾಡಿ, ಭಾರತ ಜೋಡೋ ಯಾತ್ರೆ ಸರಿಯಿಲ್ಲ. ಇದಕ್ಕೆ ಜನ ಬೆಂಬಲ ನೀಡುವುದಿಲ್ಲ ಎಂದು ಟೀಕಿಸಿದ್ದರು. ಅವರು ಕೆಲವೊಮ್ಮೆ ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಬೇಕಾದ ರಾಜಕಾರಣಿ ಅಲ್ಲ ಎಂದು ಹೇಳುತ್ತಾರೆ. ಆದರೆ ಕಳೆದ 48 ಗಂಟೆಗಳಲ್ಲಿ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು ಸೇರಿಕೊಂಡು ರಾಹುಲ್ ಗಾಂಧಿ ಹಾಗೂ ಭಾರತ ಐಕ್ಯತಾ ಯಾತ್ರೆ ಬಗ್ಗೆ ಎಷ್ಟು ಹೇಳಿಕೆ ನೀಡಿದ್ದಾರೆ ಎಂದು ನೀವೇ ಲೆಕ್ಕ ಹಾಕಿ ನೋಡಿ ಎಂದರು,
ಯಂಗ್ ಇಂಡಿಯಾ ಹಾಗೂ ನ್ಯಾಷನಲ್‌ಹೆರಾಲ್ಡ್ ಪ್ರಕರಣ ವಿಚಾರವಾಗಿ ನನಗೆ ಅ. 7ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಿದ ಬಳಿಕ ನನ್ನನ್ನು ವಿಚಾರಣೆಗೆ ಕರೆದಿದ್ದಾರೆ
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಏಕತೆಯ ಕ್ಷಣಗಳಿಗೆ ಸಾಕ್ಷಿಯಾದ ಭಾರತ್ ಜೋಡೋ
ರವಿವಾರ ಬದನವಾಳು ಗ್ರಾಮ ಎರಡು ಸಮಾಜದವರನ್ನು ದ್ವೇಷ ಮರೆತು ಒಂದಾಗಿಸಿದ ಕ್ಷಣಕ್ಕೆ ಸಾಕ್ಷಿಯಾಯಿತು. ಗ್ರಾಮದಲಿ 1993ರಲ್ಲಿ ವೀರಶೈವ-ಲಿಂಗಾಯತರು ಹಾಗೂ ದಲಿತರ ಮಧ್ಯೆ ಸಂಘರ್ಷ ನಡೆದು ಮೂವರು ದಲಿತರ ಕಗ್ಗೊಲೆಯಾಗಿತ್ತು. ಬಳಿಕ ಗ್ರಾಮದಲ್ಲಿ ಎರಡು ಸಮಾಜದ ಬೀದಿಗಳ ಮಧ್ಯೆ ಸಂಪರ್ಕ ಕಲ್ಪಿಸುವ ಕಿರಿದಾದ ರಸ್ತೆಯನ್ನು ಮುಚ್ಚಲಾಗಿತ್ತು. ಪಾಳು ಬಿದ್ದಿದ್ದ ಈ ಕಿರಿದಾದ ರಸ್ತೆಯನ್ನು ಭಾರತ್ ಜೋಡೋ ಯಾತ್ರೆ ಸಂದರ್ಭ ಸ್ವತ್ಛಗೊಳಿಸಿ ಅಗಲಗೊಳಿಸಿ ಟೈಲ್ಸ್ ಅಳವಡಿಸಲಾಯಿತು. ಎರಡು ಸಮುದಾಯಗಳ ಬೀದಿಗಳ ಮಧ್ಯೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ರಾಹುಲ್ ಗಾಂಧಿ ಟೈಲ್ಸ್‌ಗಳನ್ನು ಕೂಡಿಸಿ ಬಣ್ಣ ಹಚ್ಚಿ ಶ್ರಮದಾನ ಮಾಡಿದರು. ವೀರಶೈವ – ಲಿಂಗಾಯತ ಸಮಾಜ ಹಾಗೂ ದಲಿತ ಸಮಾಜದವರು ಈ ರಸ್ತೆಯನ್ನು ಈಗ ಬಳಸುತ್ತಿದ್ದಾರೆ. ಈ ರಸ್ತೆಗೆ ಈಗ ಭಾರತ್ ಜೋಡೋ ರಸ್ತೆ ಎಂದು ಹೆಸರಿಡಲಾಗಿದೆ. 1993ರ ಬಳಿಕ ಇದೇ ಮೊದಲ ಬಾರಿಗೆ ರವಿವಾರ ರಾಹುಲ್ ಸಮ್ಮುಖದಲ್ಲಿ ಉಭಯ ಸಮುದಾಯದವರು ಸಹಭೋಜನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.