ವಿದ್ಯುತ್‌ ಖಾಸಗೀಕರಣ ಬಿಲ್‌ ವಾಪಸ್‌ಗೆ ಆಗ್ರಹ


Team Udayavani, Oct 3, 2022, 4:12 PM IST

ವಿದ್ಯುತ್‌ ಖಾಸಗೀಕರಣ ಬಿಲ್‌ ವಾಪಸ್‌ಗೆ ಆಗ್ರಹ

ತುಮಕೂರು: ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣ ಮಾಡಲು ಸಂಸತ್‌ನ ಉಪಸಮಿತಿಯ ಮುಂದೆ ಮಂಡಿಸಿರುವ ವಿದ್ಯುತ್‌ ಖಾಸಗೀಕರಣ ಬಿಲ್‌ನ್ನು ಕೂಡಲೇ ವಾಪಸ್‌ ಪಡೆಯ ಬೇಕು ಹಾಗೂ ರೈತರಿಗೆ ಮಾರಕವಾಗಿ ರುವ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡ ಬೇಕೆಂದು ರೈತ ಸಂಘದ ರಾಜ್ಯ ಉಪಾ ಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಗ್ರಹಿಸಿದರು.

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ರಾಜ್ಯ ರೈತ ಸಂಘದ ವತಿಯಿಂದ ಅ.10 ರಂದು ರಾಜ್ಯದ ಎಲ್ಲಾ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಥಮ ಹಂತ: ಕೇಂದ್ರ ಸರ್ಕಾರ ಮಂಡಿಸಿರುವ ವಿದ್ಯುತ್‌ ಖಾಸಗಿ ಬಿಲ್‌ ಜಾರಿಗೆ ಬಂದರೆ, ಇಡೀ ದೇಶದಲ್ಲಿ ಆಹಾರ ಸ್ವಾವಲಂಬನೆ ಹಾಳಾಗುವುದ ಲ್ಲದೆ, ರೈತರು, ಬಡವರು ವಿದ್ಯುತ್‌ ಬಿಲ್‌ ಭರಿಸಲಾಗದೆ ಬೀದಿಗೆ ಬೀಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಪ್ರಥಮ ಹಂತವಾಗಿ ಈ ಹೋರಾ ಟವನ್ನು ರೈತ ಸಂಘ ಹಮ್ಮಿಕೊಂಡಿದೆ ಎಂದರು.

ವಿರೋಧ ವ್ಯಕ್ತ: ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣದ ಬಗ್ಗೆ ಈಗಾಗಲೇ ರಾಷ್ಟ್ರದಲ್ಲಿರುವ ರಾಜ್ಯಗಳ ಅಭಿಪ್ರಾಯ ಕೇಳಿದ್ದು, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ರಾಜ್ಯಗಳು ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿವೆ. ಆದರೆ ಕರ್ನಾಟಕ ಮಾತ್ರ ಇದುವರೆಗೂ ತನ್ನ ಅಭಿಪ್ರಾಯ ತಿಳಿಸಿಲ್ಲ. ಕೂಡಲೇ ರಾಜ್ಯ ಸರಕಾರ ತನ್ನ ಮೌನ ಮುರಿದು ತನ್ನ ಅಭಿಪ್ರಾಯ ತಿಳಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಅಡಕೆಯನ್ನು ನೆರೆಯ ಭೂತಾನ್‌ ಮತ್ತಿತರ ದೇಶಗಳಿಂದ ಅಮದು ಮಾಡಿಕೊಳಲು ಮುಂದಾಗಿದೆ. ಇದರಿಂದ ದೇಶದ ಅಡಕೆ ಬೆಳೆಗಾರರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಈ ಹಿಂದಿನ ಸರ್ಕಾರಗಳು ನೆರೆಯ ರಾಷ್ಟ್ರಗಳ ಅಡಕೆ ದೇಶಕ್ಕೆ ಬರದಂತೆ ಹೆಚ್ಚಿನ ಸುಂಕ ವಿಧಿಸಿ, ಆಮದಾಗುವುದನ್ನು ತಡೆದಿದ್ದರು. ಆದರೆ, ರೈತರ ಅದಾಯ ದ್ವಿಗುಣ ಮಾಡುವುದಾಗಿ ಹೇಳಿಕೊಳ್ಳುವ ಮೋದಿ ಸರ್ಕಾರ, ಅಡಕೆ ಅಮದಿಗೆ ಅವಕಾಶ ನೀಡಿ, ದೇಶದ ಅಡಕೆ ಬೆಳೆಗಾರರಿಗೆ ಸಂಕಷ್ಟ ತರಲು ಹೊರಟಿದೆ ಎಂದರು.

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್‌ ಖಾಸಗೀಕರಣ ಬಿಲ್‌ ವಾಪಸ್‌ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅ.10 ರಂದು ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರ ಗಳಲ್ಲಿ ಕರೆ ನೀಡಿರುವ ಪ್ರತಿಭಟನೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿ ಗೊಳಿಸುವಂತೆ ಎ.ಗೋವಿಂದರಾಜು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇ ಗೌಡ, ನರಸಿಂಹಮೂರ್ತಿ, ಪೂಜಾರಪ್ಪ, ಕೆಂಚಪ್ಪ, ಜಯಣ್ಣ, ರಂಗಹನುಮಯ್ಯ, ಶಬ್ಬೀರ್‌, ಲೋಕೇಶ್‌, ಮಹಿಳಾ ಘಟಕದ ಅಧ್ಯಕ್ಷ ನಾಗರತ್ನಮ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಟ್ರಾಫಿಕ್ ಮೇಲೆ ಪರಿಣಾಮ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಟ್ರಾಫಿಕ್ ಮೇಲೆ ಪರಿಣಾಮ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.