ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ, 4ಕೋಟಿ ರೂ.ಅನುದಾನ ಘೋಷಣೆ: ಆರಗ
Team Udayavani, Oct 3, 2022, 6:51 PM IST
ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂಾಯಿಗಳಷ್ಟು ಅನುದಾನ ನಿಗಡಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಲಾಗಿದೆ.
ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಹೇಳಿಕೆ ನೀಡಿದ್ದು, ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷದಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ವಿನಂತಿಸಿದ್ದಾರೆ.
ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ, ಅನುದಾನ ಒದಗಿಸಲಾಗುವುದು.
ಎಲೆ ಚುಕ್ಕೆ ಬಾಧೆ ಕುರಿತು, ಕಳೆದ ವಾರ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತೋಟಗಾರಿಕಾ ಸಚಿವ ಶ್ರೀ ಮುನಿರತ್ನ, ಮೀನುಗಾರಿಕೆ ಸಚಿವ ಶ್ರೀ ಅಂಗಾರ ಅವರೊಂದಿಗೆ, ಸಭೆ ನಡೆಸಿ, ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು.
ಸುಮಾರು 20000 ಹೆಕ್ಟೇರ್ ಅಡಿಕೆ ಬೆಲೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಭಾದಿಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ, ಹಾಗೂ ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ ಎಂದು ತೋಟಗಾರಿಕಾ ತಜ್ಞರು, ಶಿಫಾರಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.