ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಕಂಬಳ ವೇಳಾಪಟ್ಟಿ ಪ್ರಕಟ
Team Udayavani, Oct 4, 2022, 1:58 PM IST
ಮಂಗಳೂರು : ಜಿಲ್ಲಾ ಕಂಬಳ ಸಮಿತಿಯ ಸಭೆಯು ರವಿವಾರ ಮೂಡುಬಿದಿರೆಯಲ್ಲಿ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.
5ರಂದು ಶಿರ್ವ ಕಂಬಳದೊಂದಿಗೆ ಕಂಬಳ ಋತು ಪ್ರಾರಂಭಗೊಳ್ಳಲಿದ್ದು, ಎಪ್ರಿಲ್ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. ಈ ಬಾರಿ ಪಣಪಿಲದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ.
ಮಂಗಳೂರು ಪಿಲಿಕುಳದ ಕಂಬಳಕ್ಕೂ ನ. 12ರಂದು ದಿನಾಂಕ ನೀಡಲಾಗಿದ್ದು ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ. ಪಿಲಿಕುಳದಲ್ಲಿ ಕೆಲವು ವರ್ಷಗಳಿಂದ ಕಂಬಳ ಸ್ಥಗಿತಗೊಂಡಿದ್ದು ಈ ಬಾರಿ ಆಯೋಜಿಸಲು ಜಿಲ್ಲಾಡಳಿತ ಉತ್ಸುಕತೆ ತೋರ್ಪಡಿಸಿದೆ ಎನ್ನಲಾಗಿದೆ.
ಕೊರೊನಾ ಸಮಸ್ಯೆಯಿಂದಾಗಿ ಕಳೆದ ಬಾರಿಯ ಕಂಬಳ ಋತು ಡಿ. 5 ರಿಂದ ಆರಂಭಗೊಂಡಿತ್ತು ಮತ್ತು ಒಟ್ಟು 18 ಕಂಬಳಗಳ ದಿನಾಂಕಗಳನ್ನು ಕಂಬಳ ಸಮಿತಿ ಪ್ರಕಟಿಸಿತ್ತು. 5 ಕಂಬಳ ಪೂರ್ಣಗೊಳ್ಳುವಷ್ಟರಲ್ಲಿ ವಾರಾಂತ್ಯ ಕರ್ಫ್ಯೂ, ಕೊರೊನಾ ನಿರ್ಬಂಧ ಜಾರಿಗೊಂಡ ಹಿನ್ನೆಲೆಯಲ್ಲಿ ಉಳಿದ 11 ಕಂಬಳಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಫೆಬ್ರವರಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಂಡ ಬಳಿಕ ಮರು ಆರಂಭಗೊಂಡು ಎಪ್ರಿಲ್‌ನಲ್ಲಿ ಕೊನೆಗೊಂಡಿತ್ತು. ಈ ಬಾರಿ ಹಿಂದಿನಂತೆ ನಿಗದಿತ ಸಮಯಕ್ಕೆ ಆರಂಭಗೊಳ್ಳುತ್ತಿದೆ.
ಕಂಬಳ ವೇಳಾಪಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.