ಬಿಜೆಪಿ V/s ಕಾಂಗ್ರೆಸ್: ಪರೇಶ್ ಮೇಸ್ತ್ ಸಾವು ಆಕಸ್ಮಿಕ: ಹೊನ್ನಾವರ ಕೋರ್ಟ್ ಗೆ ಸಿಬಿಐ ವರದಿ
ವರದಿ ಸಿದ್ದಪಡಿಸಿ ಕೋರ್ಟ್ಗೆ ಸಲ್ಲಿಸಿದ್ದು, ಅದರಲ್ಲಿನ ಅಂಶಗಳು ಇನ್ನಷ್ಟೇ ಖಚಿತವಾಗಬೇಕಿದೆ. ವಿಚಾರಣೆಯನ್ನು ನ.16ಕ್ಕೆ ಮುಂದೂಡಲಾಗಿದೆ.
Team Udayavani, Oct 4, 2022, 2:55 PM IST
ಕುಮಟಾ/ಭಟ್ಕಳ: ಹೊನ್ನಾವರದಲ್ಲಿ 2017ರಲ್ಲಿ ಸಂಭವಿಸಿದ್ದ ಪರೇಶ ಮೇಸ್ತನ ಸಾವು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಅ. 17ಕ್ಕೆ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ : ವೇಳಾಪಟ್ಟಿ ವಿವರ ಇಲ್ಲಿದೆ
ಉತ್ತರ ಕನ್ನಡ ಜಿಲ್ಲೆ ಸಹಿತ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದು, ಗಲಭೆಗೂ ಕಾರಣವಾಗಿದ್ದ ಈ ಪ್ರಕರಣದಲ್ಲಿ ಪರೇಶ ಮೃತದೇಹ ಕೆರೆಯಲ್ಲಿ ಪತ್ತೆಯಾಗಿತ್ತು. ಇದು ಅಸಹಜ ಸಾವಲ್ಲ, ಕೊಲೆ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದರು.
ಬಿಜೆಪಿ ಸಹಿತ ವಿವಿಧ ಸಂಘಟನೆಗಳು ಭಾರೀ ಪ್ರತಿಭಟನೆಯನ್ನೂ ನಡೆಸಿದ್ದವು. ಕೊನೆಗೆ ಒತ್ತಡಕ್ಕೆ ಮಣಿದ ಅಂದಿನ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಕಳೆದ ಐದು ವರ್ಷಗಳ ಕಾಲ ಸಾಕ್ಷ್ಯಾಧಾರ ಸಂಗ್ರಹ, ಸಾಕ್ಷಿಗಳ ವಿಚಾರಣೆ ನಡೆಸಿದ ಬಳಿಕ ಸಿಬಿಐ ತನಿಖಾ ವರದಿ ಸಿದ್ದಪಡಿಸಿ ಕೋರ್ಟ್ಗೆ ಸಲ್ಲಿಸಿದ್ದು, ಅದರಲ್ಲಿನ ಅಂಶಗಳು ಇನ್ನಷ್ಟೇ ಖಚಿತವಾಗಬೇಕಿದೆ. ವಿಚಾರಣೆಯನ್ನು ನ.16ಕ್ಕೆ ಮುಂದೂಡಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪರೇಶ್ ಮೇಸ್ತ (19ವರ್ಷ)ನ ಶವ ಡಿಸೆಂಬರ್ 8ರಂದು ದೊರಕಿದ್ದ ನಂತರ ಭಾರೀ ಘರ್ಷಣೆ ನಡೆದಿತ್ತು. ಈ ಘಟನೆಯಲ್ಲಿ ಝಮಾಲ್ ಅಝಾದ್, ಅಶೀಫ್ ರಫೀಖ್, ಫೈಜಲ್, ಸಲೀಂ ಹಾಗೂ ಇಫ್ತಿಯಾಜ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಪರೇಶ್ ಮೇಸ್ತ ಪ್ರಕರಣದ ಕುರಿತು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮತ್ತೊಂದೆಡೆ ಬಿಜೆಪಿ ಮುಖಂಡರು ಕೂಡಾ ತಿರುಗೇಟು ನೀಡಿದ್ದು, ವಾಕ್ಸಮರಕ್ಕೆ ಕಾರಣವಾಗಿದೆ.
ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ. ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದೆ. ಇದು ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೆಸ್ತನಂತಹ ಅಮಾಯಕ ಯುವಕರ ರಕ್ತ ಅಂಟಿಕೊಂಡಿದೆ.
*ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.