ಭಾರತ-ದ.ಆಫ್ರಿಕಾ: ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಋತುರಾಜ್- ಬಿಷ್ಣೋಯ್
Team Udayavani, Oct 6, 2022, 5:07 PM IST
ಲಕ್ನೋ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಭಾರತ ತಂಡದಲ್ಲಿ ಎರಡು ಹೊಸ ಮುಖಗಳು ಕಾಣಿಸಿಕೊಂಡಿದೆ.
ಮಳೆಯ ಕಾರಣದಿಂದ ಟಾಸ್ ವಿಳಂಬವಾಯಿತು. ಹೀಗಾಗಿ ಪಂದ್ಯವನ್ನು ತಲಾ 40 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿತು, “ನಾವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತೇವೆ. ವಿಕೆಟ್ ನಲ್ಲಿ ಸ್ವಲ್ಪ ತೇವಾಂಶವಿದೆ ಮತ್ತು ಅದನ್ನು ಬಳಸಿಕೊಳ್ಳಲು ನಾವು ಬಯಸುತ್ತೇವೆ. ನಮಲ್ಲಿಂದು ಆರು ಬ್ಯಾಟರ್‌ಗಳು ಮತ್ತು ಐದು ಬೌಲರ್‌ಗಳು ಆಡುತ್ತಿದ್ದಾರೆ” ಎಂದು ಭಾರತ ತಂಡದ ನಾಯಕ ಶಿಖರ್ ಧವನ್ ಹೇಳಿದರು.
ಇಂದಿನ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಮತ್ತು ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಶಿಖರ್ ಧವನ್ ನಾಯಕತ್ವದಲ್ಲಿ ಬಿಷ್ಣೋಯ್ ಮತ್ತು ಗಾಯಕ್ವಾಡ್ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ.
ಭಾರತದ ಟಿ20 ತಂಡವು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿರುವ ಕಾರಣ ಮೀಸಲು ತಂಡವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
? A round of applause as Ruturaj Gaikwad and Ravi Bishnoi make their ODI debuts. ??
Go well! ?
Follow the match ▶️ https://t.co/d65WZUUDh2#TeamIndia | #INDvSA pic.twitter.com/h5mThKwkoS
— BCCI (@BCCI) October 6, 2022
ಭಾರತ ತಂಡ: ಶಿಖರ್ ಧವನ್ (ನಾ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿ.ಕೀ), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.