ಎಸ್ಎಸ್ ಸಿ ಪರೀಕ್ಷೆಯಲ್ಲೂ ಭಾಷೆ ತಾರತಮ್ಯ ಯಾಕೆ?: ಕುಮಾರಸ್ವಾಮಿ ಪ್ರಶ್ನೆ
Team Udayavani, Oct 7, 2022, 11:10 AM IST
ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿ ಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೆ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.
ಈ ವಿಷಯದಲ್ಲಿ ನಮ್ಮ ಎರಡು ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯ ಅವಧಿಯ ಸೋಲಾರ್ ಹಗರಣದ ತನಿಖೆಗೆ ಮುಂದಾದ ಬಿಜೆಪಿ ಸರ್ಕಾರ
ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.