ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ: ನಳಿನ್ ಕಮಾರ್ ಕಟೀಲ್ ವ್ಯಂಗ್ಯ
Team Udayavani, Oct 7, 2022, 1:33 PM IST
ಬೆಂಗಳೂರು: ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ನಗರದ ಅರಮನೆ ಮೈದಾನದ ‘ತ್ರಿಪುರ ವಾಸಿನಿ’, ಗೇಟ್ ನಂ.2ರಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ದೇಶ ಮಾತ್ರವಲ್ಲದೆ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಭಾರತದಿಂದ ಓಡಲು ಇಟೆಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು.
ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಶಾಸ್ತ್ರೀಜಿ ಹೊರತುಪಡಿಸಿ ಉಳಿದೆಲ್ಲ ಪ್ರಧಾನಿಗಳು ಭ್ರಷ್ಟರಾಗಿದ್ದರು. ಕಾಂಗ್ರೆಸ್ ಮುಖಂಡರೆಲ್ಲರೂ ಭ್ರಷ್ಟಾಚಾರ ಮಾಡಿದವರು ಎಂದು ಟೀಕಿಸಿದರು.
ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ- ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣನ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದುನೋಡಿ ಎಂದು ಮುನ್ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಕೇಂದ್ರದ ಹಾಗೂ ರಾಜ್ಯದ ನಾಯಕರು ಜಾಮೀನಿನಡಿ ಇದ್ದಾರೆ ಎಂದು ಅವರು ಪ್ರಸ್ತಾಪಿಸಿದರು.
ಚುನಾವಣಾ ಪೂರ್ವತಯಾರಿ ನಡೆಯುತ್ತಿದೆ. ಅದ್ಭುತ ಪ್ರತಿಕ್ರಿಯೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆ ಕುರಿತು ಮೆಚ್ಚುಗೆ ಸೂಚಿಸಿದರು. ಜನರು ಬಿಜೆಪಿ ಕಡೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು. ಕೋವಿಡ್ ಉಚಿತ ಲಸಿಕೆ ಮೂಲಕ ಮಾಸ್ಕ್ ತೆಗೆದು ಕುಳಿತುಕೊಳ್ಳಲು ಜನಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿಜಿ ಅವರು ಕಾರಣರಾಗಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.
ಇದನ್ನೂ ಓದಿ:ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಮೃತ್ಯು
ಇತರ ಪಕ್ಷಗಳ ಹತ್ತಾರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಪಕ್ಷದ ಮುಖಂಡರ ಪ್ರವಾಸ ನಡೆಸಲಾಗುತ್ತಿದೆ. ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಪ್ರಕಾಶನ ಪ್ರಕೋಷ್ಠದ ವತಿಯಿಂದ ಹೊರತಂದ ಸಮಷ್ಟಿ, ಧ್ಯೇಯಪಥ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು.
ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿಗಳಾದ ಶ್ರೀಮತಿ ಡಿ.ಕೆ. ಅರುಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಹಾಗೂ ಕೋರ್ ಕಮಿಟಿ ಸದಸ್ಯರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಸಚಿವರು, ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.