ಹೊಸನಗರ: ರೈತನ ಬಲಿ ಪಡೆದ ಅಡಕೆ ಎಲೆಚುಕ್ಕೆ ರೋಗ!


Team Udayavani, Oct 8, 2022, 11:06 AM IST

ಹೊಸನಗರ: ರೈತನ ಬಲಿ ಪಡೆದ ಅಡಕೆ ಎಲೆಚುಕ್ಕೆ ರೋಗ!

ಹೊಸನಗರ (ಶಿವಮೊಗ್ಗ): ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ.

ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ. ಸಂಜೆ 4.30ರ ಹೊತ್ತಿಗೆ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕೃಷ್ಣಪ್ಪಗೌಡ ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಜಮೀನಿನಲ್ಲಿ ಅಡಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದರು. ಆದರೆ ಎಲೆಚುಕ್ಕೆ ರೋಗದಿಂದ ಅಡಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು.

ಕೃಷಿ ಅಭಿವೃದ್ಧಿಗಾಗಿ ಕೆನರಾ ಬ್ಯಾಂಕ್ ನಲ್ಲಿ 3 ಲಕ್ಷ, ನಗರ ನೀಲಕಂಠೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ರೂ.1.5 ಲಕ್ಷ ಸಾಲ ಮಾಡಿದ್ದರು. ಅಲ್ಲದೇ ಕೃಷಿ ಕೆಲಸಕ್ಕಾಗಿ ಊರಿನಲ್ಲಿ ಹಲವರ ಹತ್ತಿರ ಕೈಸಾಲ ಮಾಡಿಕೊಂಡಿದ್ದರು. ಆದರೆ ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ:ಯೂಟ್ಯೂಬರ್ ನನ್ನು ಭೇಟಿ ಮಾಡಲು 250 ಕಿಮೀ ದೂರ ಸೈಕಲ್ ತುಳಿದ ಬಾಲಕ ; ಕೊನೆಗೆ ಆಗಿದ್ದೇನು?

ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರೋಗ ನಿಯಂತ್ರಣಕ್ಕೆ ಸರ್ಕಾರದ ಅನುದಾನ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂಪಾಯಿಗಳಷ್ಟು ಅನುದಾನ ನಿಗಡಿ ಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ. ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ,  ಅನುದಾನ ಒದಗಿಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.