ಛತ್ತೀಸ್‌ಗಢ : ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನನ್ನು ಮನಬಂದಂತೆ ಥಳಿಸಿದ ಯುವಕರ ತಂಡ
ಪೊಲೀಸರಿಂದ ಮೂವರ ಬಂಧನ
Team Udayavani, Oct 8, 2022, 12:15 PM IST
ಛತ್ತೀಸ್‌ಗಢ : ಮಕ್ಕಳ ಕಳ್ಳನೆಂದು ಶಂಕಿಸಿ ಯುವಕರ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಭಿಕ್ಷುಕನಿಗೆ ಮನಬಂದಂತೆ ಥಳಿಸಿದ ವಿಲಕ್ಷಣ ಘಟನೆ ಛತ್ತೀಸ್‌ಗಢದ ದುರ್ಗ್‌ನಲ್ಲಿ ಶುಕ್ರವಾರ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಊರಿನಲ್ಲಿ ಮಕ್ಕಳ ಕಳ್ಳರು ಬೀಡುಬಿಟ್ಟಿದ್ದಾರೆ ಎಂಬ ವಿಚಾರ ಎಲ್ಲೆಡೆ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಗಳನ್ನು ಕಂಡ ಕೂಡಲೇ ಜನ ಶಂಶಯಾಸ್ಪದ ರೀತಿಯಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮೂವರು ಸಾಧುಗಳನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ನಡೆದಿದ್ದು ಇದೀಗ ಮತ್ತೆ ಭಿಕ್ಷುಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 34, 294, 506 ಮತ್ತು 323 ಅಡಿಯಲ್ಲಿ ಕೇಸು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ವ್ಯಕ್ತಿ ಚೇತರಿಸ್ಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳ ಕಳ್ಳರೆಂದು ಶಂಕಿಸಿ ಹಲ್ಲೆ ನಡೆಸಿದ ಎರಡನೇ ಘಟನೆ ಇದಾಗಿದ್ದು ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಅಪರಿಚಿತ ವ್ಯಕ್ತಿಗಳ ಬಗ್ಗೆ ಅನುಮಾನ ಇದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.
दुर्ग में फिर बच्चा चोर के आरोप में अब मानसिक रोगी की कर दी पिटाई
– तीन दिन में बच्चा चोर के आरोप में पिटाई का दूसरा बड़ा मामला
– सोशल मीडिया में वीडियो वायरल
– दुर्ग पुलिस ने की घटना की पुष्टि
– मचांदुर पुलिस चौकी क्षेत्र का मामला@PoliceDurg @CG_Police @ChhattisgarhCMO pic.twitter.com/kDrvjLHjsU— BHILAI TIMES (@bhilaitimes) October 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.