ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅಧಿವೇಶನ ಸದ್ಯಕ್ಕಿಲ್ಲ
Team Udayavani, Oct 8, 2022, 2:33 PM IST
ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ.
ನ್ಯಾ.ನಾಗಮೋಹನ ದಾಸ್ ವರದಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಎಸ್ಸಿ ಸಮುದಾಯದ ಮೀಸಲಾತಿ ಪ್ರಮಾಣ 15-17ಕ್ಕೆ, ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣ 3-7ಕ್ಕೆ ಹೆಚ್ಚಳ ಮಾಡಲು ಸರ್ಕಾರ ಕೂಡಲೇ ಆದೇಶದ ಮೂಲಕ ಜಾರಿ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಕ್ರೈಮಿಯಾದಿಂದ ರಷ್ಯಾಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಲ್ಲಿ ಭಾರಿ ಸ್ಫೋಟ
ಕ್ಯಾಬಿನೆಟ್ ಒಪ್ಪಿಗೆ ಬಳಿಕ ವಿಧಾನ ಮಂಡಲ ಅಧಿವೇಶದಲ್ಲಿ ಕರೆಯಬೇಕು. ವಿಧಾನ ಮಂಡಲ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳದ ಬಗ್ಗೆ ಒಪ್ಪಿಗೆ ಪಡೆಯಬೇಕು. ಆದರೆ ಸದ್ಯ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹಾಗಾಗಿ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಪ್ರಸ್ತಾಪವನ್ನು ಶೆಡ್ಯೂಲ್ 9ಕ್ಕೆ ಸೇರಿಸುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಒಪ್ಪಿಗೆ ಪಡೆದ ನಂತರ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು ಕಳಿಸಿಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.