ಹೊಸಪೇಟೆ: ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಘೋಷಣೆ: ಸಂಭ್ರಾಮಚಾರಣೆ

Team Udayavani, Oct 8, 2022, 2:30 PM IST

news9

ಹೊಸಪೇಟೆ: ಎಸ್‌ಸಿ, ಎಸ್‌ಟಿ ಸಮುದಾಯ ಮೀಸಲಾತಿ ಹೆಚ್ಚಳ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ನೂರಾರು ಕಾರ್ಯಕರ್ತರು, ಶನಿವಾರ ಸಿಹಿ ಹಂಚಿ ಸಂಭ್ರಮಿಸಿದರು.

ಎಸ್‌ಸಿಗೆ ಶೇ.15 ರಿಂದ 17 ಹಾಗೂ ಎಸ್‌ಟಿಗೆ 3 ರಿಂದ 7 ಮೀಸಲಾತಿ ಹೆಚ್ಚಳಕ್ಕೆ ಕುರಿತಂತೆ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸರ್ವ ಪಕ್ಷಗಳ ಸಭೆಯಲ್ಲಿ ಸರ್ಕಾರ ಅಂಗೀಕಾರಗೊಳಿಸಿದ ಕ್ರಮವನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಖುಷಿ ಪಟ್ಟರು.

ವಾಲ್ಮೀಕಿ ಸಮಾಜದ ಮುಖಂಡ ಕಿಚಿಡಿ ಶ್ರೀನಿವಾಸ ಮಾತನಾಡಿ, ಹಲವಾರು ವರ್ಷಗಳ ಹೋರಾಟದ ಫಲವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದರಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಕಳೆದ 240 ದಿನಗಳಿಂದ ನಡೆಸಿದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರ ಕೊನೆಗೂ ಮಣಿದು, ಸರ್ಕಾರ ಈ ಎರಡು ಸಮುದಾಗಳ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಕಾರ್ಯವಾಗಿದೆ ಎಂದು ಸಂತಸ ಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ಸಂಘದ ವಿಜಯನಗರ ಜಿಲ್ಲಾಧ್ಯಕ್ಷರಾದ ಕೆ.ಪಿ.ಉಮಾಪತಿ ಮಾತನಾಡಿ, ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಸಂತಸದ ವಿಷಯವಾಗಿದೆ. ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಮೀಸಲಾತಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯರಾದ ಜೀವರತ್ನಂ, ಬಿಜೆಪಿ ಎಸ್‌ಟಿ ಜಿಲ್ಲಾಧ್ಯಕ್ಷ ಸುಭಾಷ್ ನಾಯಕ್, ತಾಲ್ಲೂಕು ಅಧ್ಯಕ್ಷ ಗುಜ್ಜಲ ರಾಮಾಂಜನಿ, ಸಂದೀಪ್ ಸಿಂಗ್,  ಮಂಡಲ ಅಧ್ಯಕ್ಷ ಕಸಟ್ಟಿ ಉಮಾಪತಿ, ಮುಖಂಡರಾದ ವ್ಯಾಸನಕೇರಿ ಶ್ರೀನಿವಾಸ, ಕಟಗಿ ಜಂಬಯ್ಯ, ಕಟಿಗಿ ರಾಮಕೃಷ್ಣ, ಶಂಕರ್ ಮೇಟಿ, ಬಂಡೆ ಶ್ರೀನಿವಾಸ, ಕಣ್ಣಿ ಶ್ರೀಕಂಠ, ಮುಖಂಡರಾದ ಹಂಪಿಯ ಎಚ್.ಹುಲಗಪ್ಪ ಕಮಲಾಪುರ ಲಕ್ಷö್ಮಣ, ಬಡಗಿ ಹುಲಗಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.