ಸ್ವಾವಲಂಬಿ: ನಿಮ್ಮ ಜಮೀನಿನ ನಕಾಶೆ ನಿಮ್ಮ ಕೈಯಲ್ಲಿ
ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು
Team Udayavani, Oct 8, 2022, 5:45 PM IST
ಬಾಗಲಕೋಟೆ: ರೈತರು ತಮ್ಮ ಜಮೀನಿನ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಲು ಸ್ವಾವಲಂಬಿ ಆ್ಯಪ್ ಮೂಲಕ ಅವಕಾಶ ಕಲ್ಪಿಸಿದ್ದು, ಇದು ದೇಶದಲ್ಲಿಯೇ ಮೊದಲ ಬಾರಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ ಎಂದು ಭೂದಾಖಲೆಗಳ ಉಪ ನಿರ್ದೇಶಕ ಮಹಾಂತೇಶ ಮುಳಗುಂದ ತಿಳಿಸಿದ್ದಾರೆ.
ಮುಟೇನ್ ಪೂರ್ವ ನಕ್ಷೆ ಯೋಜನೆಯು ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾದಾಗಿನಿಂದ ಜನಸಾಮಾನ್ಯರಿಗೆ ತಮ್ಮ ಜಮೀನುಗಳ ಪೈಕಿ ಖರೀದಿ, ವಾಟ್ನಿ, ದಾನ ಪತ್ರ ಇತ್ಯಾದಿ ಹಕ್ಕು ಬದಲಾವಣೆ ವ್ಯವಹಾರಗಳಲ್ಲಿ ವ್ಯಾಜ್ಯ ರಹಿತ ಸೇವೆ ಸಲ್ಲಿಸುವಲ್ಲಿ ಭೂಮಾಪನ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಸಾಕಷ್ಟು ಮಾರ್ಪಾಡು ಮಾಡಿ ಸಾರ್ವಜನಿಕರ ಸೇವೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ತೊಂದರೆ ನೀಗಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಅಪ್ಲಿಕೇಷನ್ ರೂಪಿಸಲಾಗಿದೆ.
ಮೂಲ ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಕಚೇರಿ ಅಲೆಯುವ ಜಂಜಾಟ ಇನ್ನು ಮುಂದೆ ತಪ್ಪಲಿದೆ. ಹೌದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ಸ್ವಾವಲಂಬಿ ವೆಬ್ ಸೈಟ್ ಆರಂಭಿಸಲಾಗಿದೆ. ಈ ವೆಬ್‌ಸೈಟ್ ಮೂಲಕವೇ ಭೂಮಿಯ ಮಾಲಿಕರು ಜಮೀನಿನ 11ಇ ನಕ್ಷೆ, ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ವೆಬ್‌ಸೈಟ್ ಮೂಲಕ ಫೀ ಭರಣ ಮಾಡಿ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿದಾರರು ಕೋರಿರುವ ಹಿಸ್ಸೆಗೆ ಸಂಬಂ ಸಿದ ನಕ್ಷೆಯನ್ನು ಇಲಾಖೆ ಮುಖಾಂತರ ಅಪ್‌ಲೋಡ್ ಮಾಡಲಾಗುತ್ತದೆ. ಅರ್ಜಿದಾರರು ಸದರಿ ನಕ್ಷೆಯನ್ನು ಡೌನ್‌ಲೋಡ್ ಮಾಡಿ, ಮಾರಾಟವಾಗಬೇಕಾದ ಭೂಮಿಯನ್ನು ನಿರ್ದಿಷ್ಟ ಅಳತೆ ಗುರುತಿಸಿ ಮರು ಅಪ್ ಲೋಡ್ ಮಾಡಬೇಕು.
ತದನಂತರ ಇಲಾಖೆಯು ಅದನ್ನು ಪರಿಶೀಲಿಸಿದ ಬಳಿಕ ಅನುಮೋದಿಸಿ ದೃಢೀಕರಿಸಿ ಮತ್ತೇ ಅಪ್‌ಲೋಡ್ ಮಾಡಲಾಗುತ್ತದೆ. ಸದರಿ ನಕ್ಷೆಯನ್ನು ಆನ್‌ಲೈನ್‌ನಲ್ಲಿ ಎಲ್ಲಿಬೇಕಾದರೂ ಪ್ರಿಂಟ್ ಪಡೆದು ಮಾರಾಟಕ್ಕೆ ನೋಂದಣಿ ಮಾಡಿಕೊಡಬಹುದು. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರತ್ಯೇಕವಾಗಿ ಪಹಣಿಗಳು ಸೃಜಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಮೊದಲು ನಾಡಕಚೇರಿಗೆ ಹೋಗಿ ಜಮೀನಿನ 11ಇ, ಪೋಡಿ ಕಾರ್ಯ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡ ಕಛೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತ್ತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಸೀಲಿಸಿ ನಕ್ಷೆ ಗುರುತಿಸಿ ಅಪ್‌ಲೋಡ್ ಮಾಡುತ್ತಿದ್ದರು. ಅಪ್ ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು. ಆದರೆ ಸ್ವಾವಲಂಬಿ ವೆಬ್ ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿ ಅತೀ ಕಡಿಮೆ ಅವ ಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಕಡ್ಡಾಯವಾಗಿ ಜಮೀನಿನ ಆರ್ ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಈ ಹೊಸ ಯೋಜನೆಯ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.