![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 8, 2022, 8:59 PM IST
ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ.
ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತೆಯ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದೇವರಾಜ್ ಹಾಗೂ ಆತನ ಸ್ನೇಹಿತರಾದ ಶೇಖರ್, ಶ್ರೀಧರ, ಭೈರ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದು, ದೇವರಾಜ್(24)ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.. ಸದ್ಯ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ದೀಪಾಂಜಲಿ ನಗರದಲ್ಲಿ ಅಕ್ಕ-ಪಕ್ಕ ಮನೆಯಲ್ಲಿ ವಾಸವಿದ್ದ ಯುವಕ ಹಾಗೂ ಸಂತ್ರಸ್ತೆ ನಾಲ್ಕು ವರ್ಷಗಳಿಂದ ಪರಸ್ಪರ ಪರಿಚಯಸ್ಥರಾಗಿದ್ದಾರೆ. ಇಬ್ಬರ ಮಧ್ಯೆ ಆತ್ಮೀಯತೆ ಇತ್ತು ಎಂದು ಹೇಳಲಾಗಿದೆ. ಈ ಮಧ್ಯೆ ಆರೋಪಿ ದೇವರಾಜ್ ಸಂತ್ರಸ್ತೆಯ ಖಾಸಗಿ ವಿಡಿಯೋ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಸದ್ಯ ಆಕೆ ಅಪ್ರಾಪ್ತೆಯಾಗಿದ್ದರಿಂದ ಮದುವೆಯಾಗಲು ನಿರಾಕರಿಸಿದ್ದಾನೆ. ಕೆಲ ದಿನಗಳ ಬಳಿಕ ಯುವತಿ ಕೂಡ ಆರೋಪಿಯನ್ನು ಮದುವೆಯಾಗಲು ಹಿಂದೇಟು ಹಾಕಿದ್ದಾಳೆ ಎಂದು ಹೇಳಲಾಗಿದೆ. ಹೀಗಾಗಿ ಆರೋಪಿ ಆಕೆಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ.
ಈ ವಿಚಾರ ತಿಳಿದ ಸಂತ್ರಸ್ತೆ ಪೋಷಕರು ಆರೋಪಿ ತನ್ನ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
You seem to have an Ad Blocker on.
To continue reading, please turn it off or whitelist Udayavani.