ಮುಂದುವರಿದ ಸಾಹಿತ್ಯ ಸಮ್ಮೇಳನ ಅನಿಶ್ಚಿತತೆ!

12ರಂದು ಬೆಂಗಳೂರು-17ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ; ನುಡಿ ಹಬ್ಬದ ಬಗ್ಗೆ ಜನರ ಜಿಜ್ಞಾಸೆ

Team Udayavani, Oct 9, 2022, 2:09 PM IST

14

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಎದುರಾಗಿರುವ ಅನಿಶ್ಚಿತತೆ ಮಧ್ಯೆಯೇ ಸಮ್ಮೇಳನದ ಸಿದ್ಧತೆ ಕುರಿತು ಅ.12ರಂದು ಬೆಂಗಳೂರು ಹಾಗೂ ಅ.17ರಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಸಮ್ಮೇಳನ ನಡೆಯುತ್ತದೋ ಇಲ್ಲವೋ, ನಡೆದರೂ ಯಾವಾಗ ನಡೆಯುತ್ತದೆ ಎಂಬ ಗೊಂದಲಗಳಿಗೆ ಸ್ಪಷ್ಟತೆ ದೊರೆಯುವ ಸಾಧ್ಯತೆಯಿದೆ. ಹೀಗಾಗಿ, ಸಾಹಿತಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಈ ಸಭೆಗಳನ್ನೇ ಎದುರು ನೋಡುವಂತಾಗಿದೆ.

ಹಾವೇರಿ ಜಿಲ್ಲೆಯಾಗಿ 25 ವಸಂತಗಳನ್ನು ಪೂರೈಸಿದರೂ ಜಿಲ್ಲೆಯಲ್ಲಿ ಒಮ್ಮೆಯೂ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸೌಭಾಗ್ಯ ಒದಗಿ ಬರಲಿಲ್ಲ ಎಂಬ ಕೊರಗು ಇಲ್ಲಿನ ಸಾಹಿತಿಗಳು, ಸಾಹಿತ್ಯಾಸಕ್ತರನ್ನು ಕಾಡುತ್ತಿದೆ. ಅಲ್ಲದೇ, ಅವಕಾಶ ಸಿಕ್ಕಾಗಲೂ ಒಂದಿಲ್ಲೊಂದು ಅಡೆತಡೆಗಳು, ಗೊಂದಲಗಳು ಎದುರಾಗುತ್ತಿರುವುದರಿಂದ ಸಮ್ಮೇಳನದ ಬಗ್ಗೆ ಜಿಜ್ಞಾಸೆ ಮೂಡುವಂತಾಗಿದೆ. ಸಮ್ಮೇಳನ ಆಯೋಜನೆ ಸಂಬಂಧ ಕೆಲ ದಿನಗಳಿಂದ ಉಂಟಾಗಿದ್ದ ಸಣ್ಣ-ಪುಟ್ಟ ಗೊಂದಲಗಳು ಈಗ ನಿವಾರಣೆಯಾಗಿದ್ದರೂ, ಯಾವಾಗ ಸಮ್ಮೇಳನ ನಡೆಯಲಿದೆ ಎಂಬ ಅನಿಶ್ಚಿತತೆ ಮುಂದುವರೆದಿದೆ.

ವಿವಿಧ ಕಾರಣಕ್ಕೆ ಮುಂದೂಡಿಕೆ: 2015ರಲ್ಲೇ ಸಮ್ಮೇಳನ ಆಯೋಜಿಸುವ ಅವಕಾಶ ಜಿಲ್ಲೆಗೆ ಸಿಕ್ಕಿತ್ತು. ಆಗಲೂ ಸಮ್ಮೇಳನವನ್ನು ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ನಡೆಸಬೇಕು. ವಾಣಿಜ್ಯ ನಗರಿ ರಾಣಿಬೆನ್ನೂರಿನಲ್ಲಿ ನಡೆಸಬೇಕೆಂದು ಆಗ್ರಹಿಸಿ ನಡೆದ ಹೋರಾಟ, ಪ್ರತಿಭಟನೆಯ ಗೊಂದಲಗಳಿಂದಾಗಿ ಅವಕಾಶ ಕೈತಪ್ಪಿತ್ತು. ಜಿಲ್ಲೆಯ ಜನಪ್ರತಿನಿ ಧಿಗಳ ಒತ್ತಡಕ್ಕೆ ಮಣಿದ ಆಗಿನ ಕಸಾಪ ಅಧ್ಯಕ್ಷ ಮನು ಬಳಿಗಾರ ಅವರು 2020ರಲ್ಲಿ ಹಾವೇರಿ ನಗರದಲ್ಲೇ ಸಮ್ಮೇಳನ ನಡೆಸಲಾಗುವುದು ಎಂಬ ಘೋಷಣೆ ಮಾಡಿದ್ದರು. ಆದರೆ, 2020ರ ಕೊನೆಗೆ ಇಲ್ಲವೇ 2021ರ ಆರಂಭದಲ್ಲೇ ಸಮ್ಮೇಳನ ಆಯೋಜಿಸಬೇಕೆಂಬ ಚಿಂತನೆ ನಡೆಸುತ್ತಿದ್ದಾಗಲೇ ಕಾಣಿಸಿಕೊಂಡ ಕೊರೊನಾ ಸಮ್ಮೇಳನಕ್ಕೆ ಹಿನ್ನಡೆಯನ್ನುಂಟು ಮಾಡಿತು. ಬಳಿಕ ಕೊರೊನಾ ಕಡಿಮೆಯಾದರೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ಘೋಷಣೆಯಾಗಿ ಮತ್ತಷ್ಟು ವಿಳಂಬಕ್ಕೆ ಕಾರಣವಾಯಿತು.

ಸಿದ್ಧತೆಯ ಕೊರತೆ: ಹಿರಿಯ ಕವಿ ಡಾ|ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಈ ಸಮ್ಮೇಳನವನ್ನು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಸಲು ಆರಂಭದಲ್ಲಿ ಮೊದಲು ದಿನಾಂಕ ನಿಗದಿಪಡಿಸಲಾಗಿತ್ತು. ಮತ್ತೆ ನವೆಂಬರ್‌ ತಿಂಗಳಿಗೆ ಮುಂದೂಡಲಾಯಿತು. ಆದರೂ, ಸಿದ್ಧತೆಗಳು ಆರಂಭಗೊಳ್ಳಲಿಲ್ಲ. ಸರಿಯಾಗಿ ಸಮಿತಿಗಳು ರಚನೆಯಾಗಲಿಲ್ಲ. ಒಂದೇ ಒಂದು ಸಭೆ ನಡೆಯಲಿಲ್ಲ. ಅನುದಾನವೂ ಬಿಡುಗಡೆಯಾಗಿಲ್ಲ. ಹೀಗಾಗಿ ಸಮ್ಮೇಳನದ ದಿನಾಂಕ ಹತ್ತಿರ ಬರುತ್ತಿದ್ದಂತೆ ಮತ್ತೂಮ್ಮೆ ಮುಂದೂಡುವುದು ಅನಿವಾರ್ಯ ಎಂಬ ವಾತಾವರಣ ನಿರ್ಮಾಣವಾಗಿದೆ.

ನಿಗದಿತ ದಿನಾಂಕಕ್ಕೆ ಸಮ್ಮೇಳನ ನಡೆಯಲಿದೆ ಎಂದು ಸರ್ಕಾರ ಹೇಳಿದರೆ, ಆ ದಿನಾಂಕಕ್ಕೆ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಕಸಾಪ ಸ್ಪಷ್ಟಪಡಿಸಿದೆ. ಈ ಗೊಂದಲ ಬಗೆಹರಿಸಲು ಇತ್ತೀಚೆಗೆ ಬೆಂಗಳೂರಿನಲ್ಲಿ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಕಸಾಪ ಅಧ್ಯಕ್ಷ ಡಾ|ಮಹೇಶ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸಮ್ಮೇಳನದ ತಯಾರಿ ಸಂಬಂಧ ಅ.12ರಂದು ಬೆಂಗಳೂರಿನಲ್ಲಿ ಹಾಗೂ ಅ.17ರಂದು ಹಾವೇರಿ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿ ಸಭೆ ನಿಗದಿಪಡಿಸಲಾಗಿದೆ. ಈ ಸಭೆಗಳಲ್ಲಾದರೂ ಸಮ್ಮೇಳನ ನಡೆಸಲು ನಿರ್ದಿಷ್ಟ ದಿನಾಂಕ ಘೋಷಿಸಿ ತಯಾರಿ ಆರಂಭಿಸಬೇಕು ಎಂಬುದು ಜಿಲ್ಲೆಯ ಸಾಹಿತಿಗಳು, ಸಾಹಿತ್ಯಾಸಕ್ತರ ಆಗ್ರಹವಾಗಿದೆ.

ಮೂಡದ ಒಮ್ಮತ

ಕಸಾಪಕ್ಕೆ ಜಿಲ್ಲೆಯವರೇ ಆಗಿರುವ ಡಾ|ಮಹೇಶ ಜೋಶಿ ಅಧ್ಯಕ್ಷರಾಗಿದ್ದಾರೆ. ಅಲ್ಲದೇ, ಜಿಲ್ಲೆಯವರೇ ಆದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಿದ್ದಾರೆ. ಹೀಗಾಗಿ, ಅದ್ಧೂರಿ ಸಮ್ಮೇಳನ ನಡೆಯುತ್ತದೆ ಎಂದು ಜನತೆ ಭಾವಿಸಿದ್ದರು. ಅದಕ್ಕೆ ತಕ್ಕಂತೆ ಬೊಮ್ಮಾಯಿ ಅವರೂ ಸಹ ಸಮ್ಮೇಳನ ನಡೆಸಲು ಬಜೆಟ್‌ನಲ್ಲೇ 20 ಕೋಟಿ ಅನುದಾನ ಮೀಸಲಿಟ್ಟಿದ್ದರು. ಆದರೂ, ಸಮ್ಮೇಳನ ದಿನಾಂಕದ ಬಗ್ಗೆ ಒಮ್ಮತ ಮೂಡದಿರುವುದು ಜನತೆಯ ಬೇಸರಕ್ಕೆ ಕಾರಣವಾಗಿದೆ

ಸಾಹಿತ್ಯ ಸಮ್ಮೇಳನ ಕುರಿತು ಚರ್ಚಿಸಲು ಅ.12ರಂದು ಬೆಂಗಳೂರಿನಲ್ಲಿ ಸಭೆ ನಿಗದಿಯಾಗಿದ್ದರೂ, ಅದು ಇನ್ನೂ ಅಧಿಕೃತವಾಗಿಲ್ಲ. ಅ.17ರಂದು ಹಾವೇರಿ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಸಭೆ ಅಧಿಕೃತವಾಗಿ ನಿಗದಿಯಾಗಿದೆ. ಆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಕಸಾಪ ರಾಜ್ಯಾಧ್ಯಕ್ಷರು, ಜಿಲ್ಲೆಯ ಜನಪ್ರತಿನಿಧಿ ಗಳು, ಸಂಘ-ಸಂಸ್ಥೆಗಳ ಪ್ರತಿನಿ ಧಿಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ನಿಗದಿಯಾಗಿರುವ ದಿನಾಂಕಕ್ಕೆ ಸಮ್ಮೇಳನ ನಡೆಸಲು ಸಾಧ್ಯವಿಲ್ಲ. ನಮಗೆ ಇನ್ನೂ ಎರಡು ತಿಂಗಳು ಕಾಲಾವಕಾಶ ಬೇಕು. ಸಮ್ಮೇಳನ ನಡೆಸುವ ಜಾಗೆಯ ಕುರಿತು ಯಾವುದೇ ಗೊಂದಲವಿಲ್ಲ.  –ಎಚ್‌.ಬಿ. ಲಿಂಗಯ್ಯ, ಕಸಾಪ ಜಿಲ್ಲಾಧ್ಯಕ್ಷರು

– ವೀರೇಶ ಮಡ್ಲೂರ

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.