ಸಾವರ್ಕರ್ ಬಗೆಗಿನ ಅಪಪ್ರಚಾರ ನಿಲ್ಲಿಸಿ, ಇಲ್ದಿದ್ರೆ ನಾವೇ ನಿಲ್ಲಿಸುತ್ತೇವೆ: ಬಿ.ಎಲ್.ಸಂತೋಷ್
Team Udayavani, Oct 9, 2022, 2:47 PM IST
ಹುಬ್ಬಳ್ಳಿ: ಭಾರತ ಆತ್ಮನಿರ್ಭರತೆಯೊಂದಿಗೆ ಮುಂದೆ ಸಾಗುತ್ತಿರುವಾಗ, ವೀರ ಸಾವರ್ಕರ್ ಅವರ ಬಗ್ಗೆ ಹಸಿ ಸುಳ್ಳುಗಳ ಅಪ್ರಪ್ರಚಾರ ನಿಲ್ಲಿಸಬೇಕು. ಇಲ್ಲವಾದರೆ ನಾವು ನಿಲ್ಲಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಎಚ್ಚರಿಕೆ ನೀಡಿದರು.
ರವಿವಾರ ಇಲ್ಲಿನ ಸವಾಯಿ ಗಂಧರ್ವ ಸಭಾಭವನದಲ್ಲಿ ಸ್ವರಾಜ್-75 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಾವರ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಕೇವಲ ಎಡಪಂಥೀಯ ವಿಚಾರಧಾರೆ, ಮತ ತುಷ್ಠೀಕರಣಕ್ಕಾಗಿ ಹಸಿ ಸುಳ್ಳುಗಳನ್ನು ಹಬ್ಬಿಸಲು ಮುಂದಾದರೆ ಸಹಿಸಿಕೊಳ್ಳಲಾಗದು. ಇಂತಹ ಕಾರಣಗಳಿಂದ ದೇಶ ಅಪಾಯ ಸ್ಥಿತಿ ಎದುರಿಸುವಂತಾಗಿದೆ. ಭಾರತ ಮಾತಾಕಿ ಜೈ ಎಂದರೆ ಆರ್ ಎಸ್ಎಸ್ ಕಾರ್ಯಕ್ರಮ ಎಂದು, ವಂದೇಮಾತರಂ ಹಾಡಿದರೆ ಎಬಿವಿಪಿ ಕಾರ್ಯಕ್ರಮ ಎಂದು ಹೇಳಲಾಗುತ್ತಿದೆ. ಭಾರತ ಮಾತೆಗೆ ಜೈ ಎನ್ನುವುದಕ್ಕೆ ನಿಮಗೆ ಮನಸಿಲ್ಲ ಎಂದರೆ ನಾವೇನು ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ:ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಕೇವಲ ಗಾಂಧೀಜಿ ಒಬ್ಬರಿಂದಲೇ ಎಂದರೆ ಉಳಿದ ಹೋರಟಗಾರಿಗೆ ಅವಮಾನ ಮಾಡಿದಂತೆ. ಗಾಂಧಿಜೀಯವರ ಬಗ್ಗೆ ಪೂರ್ಣ ಶ್ರದ್ಧೆಯಿಂದಲೇ ನಾನು ಈ ಮಾತು ಹೇಳುತ್ತೇನೆ. ಅನೇಕ ನಾಯಕರು ಅಲ್ಲದೆ ಸಾಹಿತಿಗಳು, ಕಲಾವಿದರು, ಮಹಿಳೆಯರು, ಬಾಲಕರು, ಯುವಕರು ಹೀಗೆ ಅನೇಕರು ತ್ಯಾಗ, ಬಲಿದಾನ ಇದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅಸಹಕಾರ ಚಳವಳಿ ಮಹತ್ವದ ಕೊಡುಗೆ ನೀಡಿದೆ ಎನ್ನಬಹುದು ಎಂದರು.
ನಮ್ಮ ದೇಶಕ್ಕೆ ಎಡಪಂಥೀಯ ವಿಚಾರ ಧಾರೆ ಮಾಡಿದಷ್ಟು ಅನ್ಯಾಯ ಜಗತ್ತಿನ ಬೇರಾವ ದೇಶದಲ್ಲೂ ಆಗಿಲ್ಲ. ವರ್ಷಕ್ಕೆ ಸರಾಸರಿ 32 ಲಕ್ಷ ಜನ ತಾಜ್ ಮಹಲ್ ಗೆ ಭೇಟಿ ನೋಡುತ್ತಾರೆ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳಕ್ಕೆ ಸೇರಿದಂತೆ ದೇಶಕ್ಕಾಗಿ ತ್ಯಾಗಮಾಡಿದ ಯೋಧರ ಸ್ಥಳಗಳಿಗೆ ಎಷ್ಟು ಜನ ಭೇಟಿ ನೀಡುತ್ತಾರೆ ಎಂಬ ಆತ್ಮಾವಲೋಕನ ಅಗತ್ಯ. ಮಕ್ಕಳಿಗೆ ಇದರ ಮನವರಿಕೆ ಆಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.