ಎಫ್ಎಸ್‌ಎಲ್‌ ವರದಿ ವಿಳಂಬದಿಂದ ತನಿಖೆಗೆ ತೊಡಕು


Team Udayavani, Oct 10, 2022, 1:18 PM IST

tdy-3

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಕುರಿತು ಸಾಕ್ಷ್ಯಾಧಾರ ಮಾಹಿತಿ ಕಲೆ ಹಾಕಲು ಮಹತ್ವದ ಪಾತ್ರ ವಹಿಸುವ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ವಿಳಂಬದಿಂದ ಶೇ.30 ಪ್ರಕರಣಗಳ ತನಿಖೆ ಕುಂಟುತ್ತಾ ಸಾಗುವಂತಾಗಿದೆ.

ಆಪರಾಧ ಪ್ರಕರಣಗಳಿಗೆ ತಕ್ಕಂತೆ ಪೊಲೀಸರು ನೀಡುವ ಸಾಕ್ಷ್ಯಾಧಾರದ ನೈಜತೆ ಪರಿಶೀಲಿಸಿ ತ್ವರಿತವಾಗಿ ವರದಿ ನೀಡಬೇಕಾಗಿರುವ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್‌) ಸಿಬ್ಬಂದಿ ಹಾಗೂ ಆಧುನಿಕ ತಂತ್ರಜ್ಞಾನದ ಕೊರತೆಯಿಂದ ವಿಳಂಬ ಮಾಡುತ್ತಿದೆ. ಹೀಗಾಗಿ, ಕೊಲೆ, ಅತ್ಯಾಚಾರ, ಅನುಮಾನಾಸ್ಪದ ಸಾವು, ರಸ್ತೆ ಅಪಘಾತ, ಮರಣೋತ್ತರ ಪರೀಕ್ಷಾ ವರದಿಗಳು, ನಕಲಿ ದಾಖಲೆ ಸೃಷ್ಟಿ, ಡಿಎನ್‌ಎ, ಮಾದಕ ವಸ್ತು ಸೇವನೆ, ಮೊಬೈಲ್‌ ದಾಖಲೆ, ವಿಡಿಯೋ- ಆಡಿಯೋ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗುವ ದೃಶ್ಯಗಳಿಗೆ ಸಂಬಂಧಿಸಿದ ಗಂಭೀರ ಪ್ರಕರಣಗಳ ಪೈಕಿ ರಾಜಧಾನಿಯಲ್ಲೇ 5,052 ಕೇಸ್‌ಗಳು ಎಫ್ಎಸ್‌ ಎಲ್‌ ವರದಿಗಾಗಿ ಕಾದು ಕುಳಿತಿವೆ.

ಉಳಿದಂತೆ ಜಿಲ್ಲೆಗಳಲ್ಲಿ 1,300ಕ್ಕೂ ಅಧಿಕ ಪ್ರಕರಣಗಳಲ್ಲಿ ವರದಿ ನೀಡುವುದು ಬಾಕಿ ಇವೆ. ಎಫ್ ಎಸ್‌ಎಲ್‌ ವರದಿಯೇ ಈ ಪ್ರಕರಣಗಳಿಗೆ ಬಲವಾದ ಸಾಕ್ಷ್ಯಾಧಾರಗಳಾಗಿದ್ದು, ಇವುಗಳನ್ನು ಉಲ್ಲೇಖೀಸದಿದ್ದರೆ ನ್ಯಾಯಾಲಯದಲ್ಲಿ ಪ್ರಕರಣ ಖುಲಾಸೆಗೊಳ್ಳುವ ಸಾಧ್ಯತೆ ಹೆಚ್ಚಾಗಿವೆ. ಎಫ್ಎಸ್‌ಎಲ್‌ನಿಂದ ವಿಳಂಬವಾಗಿ ವರದಿ ಬರುತ್ತಿರುವ ಪರಿಣಾಮ ರಾಜ್ಯದಲ್ಲಿ ತನಿಖಾ ಹಂತದಲ್ಲಿರುವ ಶೇ.30 ಪ್ರಕರಣಗಳು ಮುಚ್ಚಿ ಹೋಗುತ್ತಿವೆ ಎಂದು ಪೊಲೀಸ್‌ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಬೆಂಗಳೂರು, ದಾವಣಗೆರೆ, ಮಂಗಳೂರು, ಕಲುºರ್ಗಿ, ಬೆಳಗಾವಿ, ಮೈಸೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ತಲಾ 1 ಎಫ್ಎಸ್‌ಎಲ್‌ ಕೇಂದ್ರಗಳಿವೆ. ಆದರೆ, ಇವುಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಸೌಲಭ್ಯ ಒದಗಿಸಿಲ್ಲ. ಹೀಗಾಗಿ ಕೆಲ ಸೂಕ್ಷ್ಮ ಪ್ರಕರಣಗಳಲ್ಲಿ ಹೈದ್ರಾಬಾದ್‌, ಡೆಹ್ರಡೂನ್‌ ಸೇರಿ ಹೊರ ರಾಜ್ಯಗಳಿಂದ ಎಫ್ಎಸ್‌ಎಲ್‌ ವರದಿ ತರಿಸಿಕೊಳ್ಳುವುದು ಅನಿವಾರ್ಯವಾಗಿದೆ. ಜತೆಗೆ, ಎಫ್ಎಸ್‌ಎಲ್‌ಗೆ 705 ಸಿಬ್ಬಂದಿ ಮಂಜೂರಾತಿ ನೀಡಲಾಗಿದೆ. ಈ ಪೈಕಿ 162 ಹುದ್ದೆಗಳು ಇನ್ನೂ ಖಾಲಿ ಇವೆ.

ಎಫ್ಎಸ್‌ಎಲ್‌ ಕಾರ್ಯ ವಿಧಾನ ಹೇಗೆ ? : ಕರ್ನಾಟದಲ್ಲಿ ಇದುವರೆಗೆ 15 ಸಾವಿರಕ್ಕೂ ಅಧಿಕ ಪ್ರಕರಣಗಳು ತನಿಖಾ ಹಂತದಲ್ಲಿವೆ. ಕೆಲ ಸೂಕ್ಷ್ಮ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾಗುವ ಸಾಕ್ಷ್ಯಗಳನ್ನು ಪರಿಶೀಲನೆಗಳಿಗಾಗಿ ಎಫ್ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ಸಾಕ್ಷ್ಯವನ್ನು ಪರಿಶೀಲಿಸಿ ಎಫ್ಎಸ್‌ಎಲ್‌ನ ಆಯಾ ವಿಭಾಗಕ್ಕೆ ರವಾನಿಸುತ್ತಾರೆ. ಪ್ರಕರಣದ ತನಿಖಾಧಿಕಾರಿಗಳು ದಾಖಲೆಯಲ್ಲಿ ಉಲ್ಲೇಖೀಸಿದ ಅಂಶಗಳ ಕುರಿತು ಇಲ್ಲಿನ ಸೈಂಟಿಫಿಕ್‌ ಅಧಿಕಾರಿಗಳು ತಂತ್ರಜ್ಞಾನದ ಸಹಾಯದಿಂದ ಕೂಲಂಕಷವಾಗಿ ಸಾಕ್ಷ್ಯಗಳಲ್ಲಿರುವ ಅಂಶಗಳನ್ನು ಪರಿಶೀಲಿಸುತ್ತಾರೆ. ಪರಿಶೀಲನೆ ವೇಳೆ ಕಂಡು ಬರುವ ಅಂಶಗಳ ಬಗ್ಗೆ ವರದಿಯಲ್ಲಿ ಉಲ್ಲೇಖೀಸಿ ಕೆಲ ಪ್ರಕ್ರಿಯೆಗಳ ಮೂಲಕ ತನಿಖಾಧಿಕಾರಿಗಳಿಗೆ ಕಳುಹಿಸುತ್ತಾರೆ. ಈ ವರದಿಯಲ್ಲಿ ಉಲ್ಲೇಖೀಸಿರುವ ಅಂಶಗಳನ್ನು ತೆಗೆದುಕೊಂಡು ತನಿಖಾಧಿಕಾರಿಗಳು ತನಿಖೆ ಮುಂದುವರೆಸುತ್ತಾರೆ.

ಪ್ರತಿ ಕೇಸ್‌ಗಳ ಎಫ್ಎಸ್‌ ಎಲ್‌ ವರದಿಯನ್ನು ತಿಂಗಳೊಳಗೆ ನೀಡಬೇಕೆಂಬುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಲ್ಲಿ ಸಾಕಷ್ಟು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ನಡೆಯುತ್ತಿದೆ. -ಧರ್ಮೇಂದ್ರ ಕುಮಾರ್‌ ಮೀನಾ, ನಿರ್ದೇಶಕರು, ಎಫ್ಎಸ್‌ಎಲ್ ‌

 

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.