ಕೆಮ್ಮಣ್ಣು ನಾಲೆ ಸಂಪರ್ಕ ಸೇತುವೆ ದುರಸ್ತಿ ಎಂದು?


Team Udayavani, Oct 10, 2022, 4:44 PM IST

tdy-12

ಮದ್ದೂರು: ಕೆಮ್ಮಣ್ಣು ನಾಲೆ ಸಂಪರ್ಕ ಕಲ್ಪಿಸುವ ಸೇತುವೆಗಳು ಕಳೆದ ಹಲವಾರು ತಿಂಗಳಿಂದಲೂ ದುರಸ್ತಿಯಲ್ಲಿದ್ದರೂ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವ ಬಗ್ಗೆ ಸ್ಥಳೀಯ ರೈತರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಚನ್ನೇಗೌಡನದೊಡ್ಡಿ ಗ್ರಾಮದಿಂದ ದೇಶಹಳ್ಳಿ, ವಳಗೆರೆ ಹಳ್ಳಿ, ಪಟ್ಟಣ ಸೇರಿ ಸ್ಥಳೀಯ ರೈತರ ಜಮೀನುಗಳಿಗೆ ತೆರಳುವ ನಾಲಾ ರಸ್ತೆ ಸೇತುವೆ ತಿಂಗಳಿಂದಲೂ ಮುರಿದು ಬಿದ್ದಿದೆ. ಆದರೆ, ಇದುವರೆಗೂ ಅಧಿಕಾರಿಗಳು ದುರಸ್ತಿಗೆ ಮುಂದಾ ಗಿಲ್ಲ. ಎಂ.ಸಿ.ಲಿಂಗೇಗೌಡರ ತೋಟದ ಜಮೀನಿನಿಂದ ಸಂಪರ್ಕ ಕಲ್ಪಿಸುವ ಕೆಮ್ಮಣ್ಣು ನಾಲೆ ಸೇತುವೆ ಕಳೆದ 2 ವರ್ಷಗಳಿಂದಲೂ ಮುರಿದು ಬಿದ್ದು ಸಂಚಾರಕ್ಕೆ ತೊಡಕ್ಕುಂಟಾಗಿದೆ. ಆದರೆ, ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದಾರೆ.

ಈವರೆಗೂ ಸೂಕ್ತ ಕ್ರಮವಿಲ್ಲ: ಸೇತುವೆ ಮುರಿದು ಬಿದ್ದಿರುವ ಪರಿಣಾ ಮವಾಗಿ ಪಟ್ಟಣಕ್ಕೆ ತೆರಳುವ ನಿವಾಸಿಗಳು ಸುಮಾರು 2 ಕಿ.ಮೀ. ಕ್ರಮಿಸಬೇಕಾದ ಅನಿವಾ ರ್ಯತೆಯಿದೆ. ನಾಲಾ ಮಾರ್ಗದ ರಸ್ತೆ ಡಾಂಬ ರೀಕರಣ ಕೈಗೊಳ್ಳಲು ಅನುದಾನ ಬಿಡುಗಡೆಯಾಗಿದ್ದರೂ ಅಪೂರ್ಣ ಕಾಮಗಾರಿಯಿಂದಾಗಿ ಹಲವು ಅದ್ವಾನ ಕಾಣಸಿಗುತ್ತಿವೆ. ನಾಲೆಯುದ್ದಕ್ಕೂ ಬೆಳೆದು ನಿಂತಿರುವ ಆಳೆತ್ತರದ ಗಿಡಗಂಟಿ, ತೂಬು ನಿರ್ವಹಣೆ ಕೊರತೆ, ಕಿತ್ತು ನಿಂತಿರುವ ರಸ್ತೆ, ನಾಲೆ ದುರಸ್ತಿ ಕಾಣದೆ ಹಲವಾರು ವರ್ಷ ಕಳೆದಿದ್ದರೂ ಸ್ಥಳೀಯ ಅಧಿಕಾರಿಗಳು ಕ್ರಮವಹಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚನ್ನೇಗೌಡನದೊಡ್ಡಿ ಗ್ರಾಮದಿಂದ ಮದ್ದೂರಮ್ಮ ಕೆರೆವರೆಗೂ ರಸ್ತೆ ಎರಡೂ ಬದಿ ಆಳೇತ್ತರದ ಗಿಡ ಬೆಳೆದುನಿಂತಿವೆ. ಆದರೆ, ತೆರವು ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ನಿತ್ಯ ಅಪಘಾತ: ಚನ್ನೇಗೌಡನದೊಡ್ಡಿ ಗ್ರಾಮದ ನಾಲಾ ಸೇತುವೆ ಮುರಿದು ಬಿದ್ದು ತಿಂಗಳುಗಳೇ ಕಳೆದಿವೆ. ಜತೆಗೆ ತಡೆಗೋಡೆ ಇಲ್ಲದೆ ಹಲವು ಅಪಾಯಗಳಿಗೆ ಕಾರಣವಾಗಿದ್ದು ಈ ಭಾಗದ ರೈತರು ತಮ್ಮ ಜಮೀನುಗಳಿಗೆ ತೆರಳಲು ಸಂಕಷ್ಟ ಪಡಬೇಕಿದೆ. ಈಗಾಗಲೇ ಹಲವಾರು ಮಂದಿ ಬೈಕ್‌ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಪ್ರತಿನಿತ್ಯ ಜರುಗುತ್ತಿವೆ.ಈ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಗಮನಕ್ಕೂ ತಂದರೂ ಇದುವರೆಗೂ ದುರಸ್ತಿಗೆ ಮುಂದಾಗಿಲ್ಲ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೆಮ್ಮಣ್ಣು ನಾಲಾ ಸೇತುವೆ ದುರಸ್ತಿಗೆ ಈಗಾಗಲೇ ಡಿಪಿಆರ್‌ ಪ್ರಕ್ರಿಯೆ ಮುಗಿದಿದೆ. ಅನುದಾನ ಬಿಡುಗಡೆ ಬಳಿಕ ಸೇತುವೆ ನಿರ್ಮಾಣಕ್ಕೆ ಮುಂದಾಗಲಿದ್ದೇವೆ. ಜತೆಗೆ ಚನ್ನೇಗೌಡನದೊಡ್ಡಿ ಗ್ರಾಮದ ನಾಲಾ ಸೇತುವೆ ದುರಸ್ತಿಗೆ ತಾತ್ಕಾಲಿಕ ಕ್ರಮವಹಿಸಲಾಗುವುದು. – ತಾರಾ, ಎಇಇ, ಕಾವೇರಿ ನೀರಾವರಿ ನಿಗಮ, ಮದ್ದೂರು

ಕೆಮ್ಮಣ್ಣು ನಾಲಾ ಸೇತುವೆ ಮುರಿದುಬಿದ್ದು ಹಲವು ದಿನಗಳೇ ಕಳೆದಿದ್ದರೂ ಇದುವರೆಗೂ ದುರಸ್ತಿ ಮಾಡಿಲ್ಲ. ಅಧಿಕಾರಿಗಳು ದುರಸ್ತಿಗೆ ಮುಂದಾಗದಿದ್ದಲ್ಲಿ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. ಸಿ.ಅಪೂರ್ವಚಂದ್ರ, ತೋಟದ ಮನೆ ನಿವಾಸಿ, ಎಚ್‌.ಕೆ.ವಿ.ನಗರ

 

ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.