ಅಮೆರಿಕದ ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್
Team Udayavani, Oct 10, 2022, 8:00 PM IST
ಸ್ಟಾಕ್‌ಹೋಂ: ಅಮೆರಿಕ ಮೂಲದ ಮೂವರು ಆರ್ಥಿಕ ತಜ್ಞರು ಈ ಬಾರಿಯ ಅರ್ಥಶಾಸ್ತ್ರ ನೊಬೆಲ್ ಗೌರವಕ್ಕೆ ಭಾಜನರಾಗಿದ್ದಾರೆ. ಅಮೆರಿಕದ ಫೆಡರಲ್ ರಿಸರ್ವ್‌ನ ಮಾಜಿ ಮುಖ್ಯಸ್ಥ ಬೆನ್ ಎಸ್. ಬರ್ನನ್ಕೆ ಹಾಗೂ ಮತ್ತಿಬ್ಬರು ಅರ್ಥಶಾಸ್ತ್ರಜ್ಞರಾದ ಡಗ್ಲಸ್ ಡಬ್ಲ್ಯು. ಡೈಮಂಡ್ ಮತ್ತು ಫಿಲಿಪ್ ಎಚ್. ಡಿಬ್ವಿಗ್ ಅವರಿಗೆ ಬ್ಯಾಂಕುಗಳು ಮತ್ತು ಆರ್ಥಿಕ ಬಿಕ್ಕಟ್ಟು ಕುರಿತು ನಡೆಸಿದ ಸಂಶೋಧನೆಗಾಗಿ ಈ ಗೌರವ ಸಂದಿದೆ.
ಬ್ಯಾಂಕುಗಳು ಪತನವಾಗದಂತೆ ನೋಡಿಕೊಳ್ಳುವುದು ಎಷ್ಟು ಮುಖ್ಯ ಎಂಬುದು ಇವರ ಸಂಶೋಧನೆಯಿಂದ ತಿಳಿದುಬರುತ್ತದೆ. ವಿಶೇಷವಾಗಿ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ಒಂದು ಅರ್ಥವ್ಯವಸ್ಥೆಯಲ್ಲಿ ಬ್ಯಾಂಕುಗಳ ಪಾತ್ರವೇನು ಮತ್ತು ಹಣಕಾಸು ಮಾರುಕಟ್ಟೆಯನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನೂ ಈ ಮೂವರು ತಿಳಿಸಿಕೊಟ್ಟಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ನೊಬೆಲ್ ಸಮಿತಿ ಹೇಳಿದೆ.
ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯು 9 ಲಕ್ಷ ಡಾಲರ್ ನಗದು ಬಹುಮಾನವನ್ನು ಹೊಂದಿದ್ದು, ಡಿ.10ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದೂ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.