ಎಸಿಬಿ ರದ್ದು ಪ್ರಶ್ನಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ತಿರಸ್ಕಾರ
Team Udayavani, Oct 10, 2022, 9:45 PM IST
ನವದೆಹಲಿ: ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಮಾಡಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಕರ್ನಾಟಕ ಪೊಲೀಸ್ ಪೊಲೀಸ್ ಮಹಾಸಂಘದ ವಿ.ಶಶಿಧರ್ ಮತ್ತು ಇತರರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಹಿಮಾ ಕೋಹ್ಲಿ ಅವರನ್ನೊಳಗೊಂಡ ನ್ಯಾಯಪೀಠ “ಎಸಿಬಿಯನ್ನು ರದ್ದು ಮಾಡುವ ವೇಳೆ, ಅದರ ವ್ಯಾಪ್ತಿಯಲ್ಲಿ ಇದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ, ಅದುವೇ ತನಿಖೆಯನ್ನು ನಡೆಸಲಿದೆ ಎಂದು ಹೈಕೋರ್ಟ್ ಹೇಳಿತ್ತು.
ಇದರಿಂದಾಗಿ ಅತೃಪ್ತಗೊಳ್ಳುವ ಪ್ರಶ್ನೆ ಎಲ್ಲಿಂದ ಬಂತು. ಈ ವಿಚಾರದಲ್ಲಿ ನ್ಯಾಯಪೀಠ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ಹೇಳಿತು.
ಅದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು “ಎಸಿಬಿಗೆ ತನಿಖೆ ಮಾಡುವ ವ್ಯಾಪ್ತಿ ಲೋಕಾಯುಕ್ತಕ್ಕೆ ಇಲ್ಲ’ ಎಂದು ಅರಿಕೆ ಮಾಡಿಕೊಂಡರು. ಅದಕ್ಕೆ ಸಹಮತ ವ್ಯಕ್ತಪಡಿಸದ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸುವುದಾಗಿ ಹೇಳಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.