ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿರುವ ಬಿಜೆಪಿ: ಸಿದ್ದು
Team Udayavani, Oct 10, 2022, 10:30 PM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸರಕಾರ ನೇಮಿಸಿದ್ದ ನ್ಯಾ| ನಾಗಮೋಹನ ದಾಸ್ ಸಮಿತಿಯ ಶಿಫಾರಸಿನಂತೆ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಇದು ಬಿಜೆಪಿಯ ಸುಳ್ಳಿನ ಕಂತೆಗೆ ಇನ್ನೊಂದು ಸೇರ್ಪಡೆಯಾಗುತ್ತದೆ ಅಷ್ಟೆ ಎಂದು ಕುಟುಕಿದ್ದಾರೆ.
ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನಂತೆ ಒಟ್ಟು ಮೀಸಲಾತಿ ಶೇ.50 ಮೀರುವಂತಿಲ್ಲ. ಮೀಸಲು ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ. ಕಾನೂನಿನ ಈ ಬಿಕ್ಕಟ್ಟಿನ ಬಗ್ಗೆ ರಾಜ್ಯದ ಬಿಜೆಪಿ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.