ಪಿರಿಯಾಪಟ್ಟಣ: ತಂಬಾಕು ಹರಾಜು ಪ್ರಕ್ರಿಯೆ ಆರಂಭ; ಸಂಸದ, ಶಾಸಕರ ಗೈರು


Team Udayavani, Oct 11, 2022, 11:53 AM IST

8

ಪಿರಿಯಾಪಟ್ಟಣ: ಇಲ್ಲಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಗೆ ಪ್ರತಿ ವರ್ಷ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಕೆ. ಮಹದೇವ್ ಆಗಮಿಸಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಇವರಿಬ್ಬರ ಗೈರು ಹಾಜರಿಯಲ್ಲಿ ತಂಬಾಕು ಮಂಡಳಿ ಉಪಾಧ್ಯಕ್ಷ, ಮಾಜಿ ಶಾಸಕ ಹೆಚ್.ಸಿ. ಬಸವರಾಜು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನೆರೆ ಹಾವಳಿ, ಲಾಕ್ಡೌನ್ ಸಮಸ್ಯೆಯಿಂದ ರೈತರು ತತ್ತರಿಸಿ ಹೋಗಿದ್ದು, ಈ ಬಾರಿಯೂ ಭೂಮಿಗೆ ಬಿತ್ತಿದ ತಂಬಾಕು ಬೆಳೆ, ಅತೀವೃಷ್ಠಿಗೆ ತುತ್ತಾಗಿ ಬೆಳೆ ಕುಂಠಿತವಾಗಿ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಈ ಸಂದರ್ಭದಲ್ಲಿ ಸರ್ಕಾರ ಮತ್ತು ತಂಬಾಕು ಮಂಡಳಿ ಅವರ ನೆರವಿಗೆ ಧಾವಿಸಿ ಸೂಕ್ತ ಬೆಂಬಲ ಬೆಲೆ ನೀಡಬೇಕು ಅದಕ್ಕಾಗಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿರುವ ಖರೀದಿದಾರ ಕಂಪನಿಗಳಿಗೆ ಸಮರ್ಪಕ ಬೆಂಬಲ ಬೆಲೆ ನೀಡುವಂತೆ ಸೂಚಿಸಲಾಗಿದೆ ಎಂದರು.

ಮುಂದುವರೆದು, ಆರಂಭದಲ್ಲಿ 200 ರೂ.ಗೆ ಹರಾಜು ಮಾಡಲಾಗಿದೆ. ಅದರಿಂದ ಇಂದು ಪ್ರಾರಂಭದ ದಿನ ಐದು ಕಂಪನಿಗಳು ಖರೀದಿಯಲ್ಲಿ ಭಾಗವಹಿಸಿದ್ದು, 9 ಬ್ಯಾಂಕ್ ಗಳು ಗ್ಯಾರಂಟಿಯ ಬಗ್ಗೆ ಬೆಂಬಲ ಸೂಚಿಸಿವೆ. ಇನ್ನು ಕೆಲವು ದಿನಗಳಲ್ಲಿ ಆಂಧ್ರಪ್ರದೇಶ ಹರಾಜು ಮಾರುಕಟ್ಟೆ ಮುಗಿಯಲಿದ್ದು, ನಂತರ 21 ಕಂಪನಿಗಳು ತಂಬಾಕು ಖರೀದಿಯಲ್ಲಿ ಭಾಗವಹಿಸಲಿವೆ. ಆದ್ದರಿಂದ ತಂಬಾಕು ಖರೀದಿದಾರರು ತಂಬಾಕು ಬೆಲೆಯಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದರು.

ಉತ್ತಮ ಮಾರುಕಟ್ಟೆ ನಿರೀಕ್ಷೆ:  ತಂಬಾಕು ಹರಾಜು ಮಂಡಳಿ ಕಾರ್ಯದರ್ಶಿ ವೇಣುಗೋಪಾಲ್ ಮಾತನಾಡಿ, ಕಳೆದ ಬಾರಿ 185 ರೂ. ಗಳಿಂದ ಆರಂಭವಾಗಿ 206 ರೂ. ಗಳ ವರೆಗೆ ಮಾರಾಟವಾಗಿದ್ದು, ಈ ಬಾರಿ ತಂಬಾಕು 200 ರೂ.ಗಳಿಗೆ ಆರಂಭ ಕಂಡಿರುವುದು ರೈತರಿಗೆ ತುಸು ಸಮಾಧಾನ ತಂದಿದೆ. ಬ್ರೆಜಿಲ್ ಮತ್ತು ಜಿಂಬಾಬ್ವೆ ದೇಶಗಳಲ್ಲಿ 50 ಮಿಲಿಯನ್ ತಂಬಾಕು ಅಧಿಕವಾಗಿರುವುದರಿಂದ ಗುಣಮಟ್ಟದ ತಂಬಾಕು ಮಾರಾಟಕ್ಕೆ ಅವಕಾಶವಿದೆ. ಅಲ್ಲದೆ ಈ ಬಾರಿ ಪೈಸೆ ಏರಿಕೆಯನ್ನು ತಡೆದು 1 ರೂ. ಗಳ ಪೂರ್ಣ ಪ್ರಮಾಣದ ಏರಿಕೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಇದು ರೈತರಿಗೆ ಲಾಭ ತರಲಿದೆ ಎಂದು ತಿಳಿಸಿದರು.

ಗುಣಮಟ್ಟದ ಬೇಲ್ ತನ್ನಿ: ಐಟಿಸಿ ಕಂಪನಿ ಲೀಫ್ ಮ್ಯಾನೇಜರ್ ಶ್ರೀನಿವಾಸ ರೆಡ್ಡಿ ಮಾತನಾಡಿ, ಈ ಬಾರಿ ರೈತರು ಆರಂಭದಲ್ಲಿ ಎಲ್ಲಾ ರೀತಿಯ ಗ್ರೇಟ್ ಮಾರಾಟ ಮಾಡುವುದರಿಂದ ವಿದೇಶಗಳಿಗೆ ಸ್ಯಾಂಪಲ್‌ ಕಳುಹಿಸಲು ಅನುಕೂಲವಾಗುತ್ತದೆ. ಅಲ್ಲದೆ ರಾಜ್ಯದಲ್ಲಿ ಶೇ. 25 ರಷ್ಟು ಮಾತ್ರ ಕಡಿಮೆ ಗುಣಮಟ್ಟದ ತಂಬಾಕಿದ್ದು, 40 ಉತ್ತಮ ಮತ್ತು 45 ರಷ್ಟು ಮಧ್ಯಮ ದರ್ಜೆ ತಂಬಾಕು ಉತ್ಪಾದನೆಯಾಗಿದೆ. ಆರಂಭದಲ್ಲಿ 7 ಕಂಪನಿಗಳು ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿವೆ. ಆದ್ದರಿಂದ ರೈತರು ಮಾರುಕಟ್ಟೆಯನ್ನು ಅರಿತು ಮಾರಾಟಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಾಜು ಅಧೀಕ್ಷಕರಾದ ರಾಮ್ ಮೋಹನ್, ಪ್ರಭಾಕರ್, ಶಂಭುಗೌಡ ಸೇರಿದಂತೆ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.