24 ಗಂಟೆಗಳಲ್ಲಿ ಎಫ್ಐಆರ್ ವೆಬ್ಸೈಟ್ನಲ್ಲಿ ಪ್ರಕಟಿಸಬೇಕು
Team Udayavani, Oct 12, 2022, 7:35 AM IST
ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್ಐಆರ್) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್ಸೈಟ್ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್ ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು.
ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ.
ಈ ಬಗ್ಗೆ ಅರ್ಜಿದಾರರು 2022ರ ಸೆ.19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಆದ್ದರಿಂದ ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.