![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 11, 2022, 10:16 PM IST
ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ಹುತ್ತಾದಿಂಬ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಹಿರಿಯೂರಿನಲ್ಲಿ ಸೋಮವಾರ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರವನ್ನು ಹಿರಿಯೂರಿನಲ್ಲಿ ಶವಪರೀಕ್ಷೆ ಹಾಗೂ ಪಂಚನಾಮೆ ನಡೆಸಿ ಮಂಗಳವಾರ ಸಂಜೆ ಸ್ವಗ್ರಾಮಕ್ಕೆ ತರಲಾಯಿತು.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ವಕ್ತಾರ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹಿರಿಯೂರಿನಲ್ಲಿ ಇದ್ದು ಕಾರ್ಯಕರ್ತನ ಶವ ಆಸ್ಪತ್ರೆಗೆ ಸಾಗಿಸಿ ಶವ ಪರೀಕ್ಷೆ ಮತ್ತು ದೂರು ದಾಖಲಿಸಲು ನೆರವಾದರು. ಮೃತನ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರ ಮೂಲಕ ಅಂಬುಲೆನ್ಸ್‌ನಲ್ಲಿ ಕಳಿಸಿಕೊಟ್ಟರು.
ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಪಕ್ಷದ ವತಿಯಿಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಲಾಯಿತು. ಕಾಂಗ್ರೆಸ್ ಪ್ರಮುಖರಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ, ಜಿಪಂ ಮಾಜಿ ಉಪಾಧ್ಯಕ್ಷ ಕಲಗೋಡು ರತ್ನಾಕರ್, ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್,ಪ್ರಮುಖರಾದ ಹೊಳೆಯಪ್ಪ, ಸೋಮಶೇಖರ್ ಲಾವಿಗ್ಗೆರೆ, ಹಮೀದ್ ಖಾನ್, ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್‌ರಾಜ್ ಕಣ್ಣೂರು ಮತ್ತಿತರರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.